ಮಡಿಕೇರಿ, ಆ. ೨೮: ರಾಜ್ಯದಲ್ಲಿ ಎಲ್ಲಾ ಜಿಲ್ಲೆಯಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕ್ರಮ ವಹಿಸಿದೆ.

೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಂಟಿಥಿ Wheಡಿe ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿತ್ತು. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ೨೦೧೧ ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ ೨೦೨೪ ರಲ್ಲಿ ನೋಂದಣಿ ಕಾಯ್ದೆ ೧೯೦೮ರ ಕಲಂ (೫) ರ ಹಾಗೂ ಕಲಂ (೬) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿದೆ. ಂಟಿಥಿ Wheಡಿe ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಂಟಿಥಿ Wheಡಿe ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿತ್ತು. ಆದರೆ ಂಟಿಥಿ Wheಡಿe ನೋಂದಣಿಯಲ್ಲಿ ದಸ್ತಾವೇಜು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಂಟಿಥಿ Wheಡಿe ನೋಂದಣಿ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿ ಸಿಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ನೋಂದಣಾ ಧಿಕಾರಿಗಳು ತಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಸಾರ್ವಜನಿಕ ಮಾಹಿತಿ ನೀಡುವಂತೆ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂತಗಳ ಆಯುಕ್ತರು, ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿಗಳಿಗೆ ಮತ್ತು ಉಪನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.