ಮಡಿಕೇರಿ, ಆ. ೨೯: ವೀರಶೈವ ಲಿಂಗಾಯತ ಸಮಾಜ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-೩ಬಿ) ಅಭಿವೃದ್ಧಿಗೆ ೨೦೨೪-೨೫ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಬಯಸುವವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.

ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮಒನ್/ ಬೆಂಗಳೂರುಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ೨೦೨೩-೨೪ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ hಣಣಠಿs://ಞvಟಜಛಿಟ. ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ದೂರವಾಣಿ ಸಂಖ್ಯೆ ೦೮೦ ೨೨೮೬೫೫೨೨/ ೯೯೦೦೦೧೨೩೫೧ ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಗಳನ್ನು ದೂರವಾಣಿ: ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.