ಸೋಮವಾರಪೇಟೆ, ಆ. ೨೮: ಪ್ರಸಕ್ತ ತಿಂಗಳ ೯ನೇ ತಾರೀಕಿನಿಂದ ಪದವಿ ಕಾಲೇಜುಗಳು ಆರಂಭಗೊAಡಿದ್ದರೂ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ತಕ್ಷಣ ಕಾಲೇಜುಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಗೊಳಿಸಿ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಮುಂದಾಗಬೇಕೆAದು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ. ಶ್ಯಾಂಪ್ರಸಾದ್ ಒತ್ತಾಯಿಸಿದ್ದಾರೆ.

ಜಿಲ್ಲೆಯಾದ್ಯಂತ ೧೦೦ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಾರಿ ಕಾಲೇಜುಗಳು ಆರಂಭಗೊAಡಿದ್ದರೂ ಈವರೆಗೆ ನೇಮಕಾತಿ ಮಾಡಿಲ್ಲ. ಇದರಿಂದಾಗಿ ಉಪನ್ಯಾಸಕರು ನಿರುದ್ಯೋಗದ ಸಮಸ್ಯೆಯೊಂದಿಗೆ ಆರ್ಥಿಕವಾಗಿ ದುರ್ಬಲರಾಗುತ್ತಿದ್ದಾರೆ. ಉಪನ್ಯಾಸಕರ ನೇಮಕಾತಿ ವಿಳಂಬವಾದರೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೂ ಕುಂಠಿತಗೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಕ್ಷಣ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಇವರುಗಳಿಗೆ ಸೇವಾ ಭದ್ರತೆ ಒದಗಿಸಬೇಕು. ನಿವೃತ್ತಿಯಾಗುವ ಸಂದರ್ಭ ೫ ಲಕ್ಷ ಈಡುಗಂಟು ನೀಡಬೇಕೆಂದು ಶ್ಯಾಂ ಪ್ರಸಾದ್ ಒತ್ತಾಯಿಸಿದ್ದಾರೆ.