ಸೋಮವಾರಪೇಟೆ,ಆ.೨೯: ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಗಳಿAದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಅತ್ಯಾಚಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಸಂತ್ರಸ್ಥರಿಗೆ ಶೀಘ್ರ ನ್ಯಾಯ ದೊರಕಬೇಕು. ಮಹಿಳೆಯರ ರಕ್ಷಣೆಗೆ ವಿಶೇಷ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ನಂತರ ಮೆರವಣಿಗೆಯ ಮೂಲಕ ತಾಲೂಕು ಕಚೇರಿಗೆ ತೆರಳಿ, ಈ ಸಂಬAಧಿತ ಮನವಿಯನ್ನು ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಇನ್ನರ್ ವೀಲ್‌ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ಅಧ್ಯಕ್ಷೆ ಸಂಗೀತಾ ದಿನೇಶ್, ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಖಂಡನೀಯ. ಕೂಡಲೇ ಸ್ಥಳೀಯ ಸರ್ಕಾರಗಳು ಎಚ್ಚೆತ್ತುಕೊಂಡು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಇದನ್ನು ನಿಯಂತ್ರಿಸಲು ಕಠಿಣ ಕಾನೂನನ್ನು ಜಾರಿಗೆ ತರಬೇಕೆಂದು ಹೇಳಿದರು.

ಪ್ರತಿಭಟನೆಯಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ, ಪ್ರಗತಿಪರ ಮಹಿಳಾ ವೇದಿಕೆಯ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್, ರಾಜ್ಯ ಲೇಖಕಿಯರ ಬಳಗದ ಶರ್ಮಿಳಾ ರಮೇಶ್, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್, ಅಕ್ಕನ ಬಳÀಗದ ಅಧ್ಯಕ್ಷೆ ಚಂದ್ರಿಕಾ, ಟೈರ‍್ಸ್ ಅಸೋಸಿಯೇಷನ್ ಅಧ್ಯಕ್ಷೆ ಇಂದಿರಾ ಮೋಣಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಸತೀಶ್, ಅಕ್ಷಯ ಮಹಿಳಾ ಬ್ಯಾಂಕ್‌ನ ಲೋಕೇಶ್ವರಿ ಗೋಪಾಲ್, ಸ್ತಿçà ಶಕ್ತಿ, ಬಿಜೆಪಿ ಮಹಿಳಾ ಮೋರ್ಚ, ಜೇಸಿಐ, ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಸೇರಿದಂತೆ ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.