ಸಿದ್ದರಾಮಯ್ಯ ಅರ್ಜಿ:ತಾ. ೩೧ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು, ಆ. ೨೯: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ನೀಡಿರುವುದನ್ನು ರದ್ದು ಮಾಡಲು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತಾ. ೩೧ಕ್ಕೆ ಮುಂದೂಡಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘಿ, ಸಿಎಂ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹಾಜರಾಗಿದ್ದರು. ದೂರುದಾರ ಸ್ನೇಹಮಯಿ ಕೃಷ್ಣ ಟಿ.ಜೆ. ಅಬ್ರಹಾಂ, ಪ್ರದೀಪ್ ಕುಮಾರ್ ಕೂಡ ಹಾಜರಾಗಿದ್ದರು. ಈ ವೇಳೆ ಕೆಲ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಆಕ್ಷೇಪಣೆಗೆ ನಮ್ಮ ಪ್ರತಿಕ್ರಿಯೆ ಸಲ್ಲಿಸಬೇಕಿದೆ. ಅಲ್ಲದೆ ರಾಜ್ಯಪಾಲರು ಈಗಲೂ ತಮ್ಮ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ಅಭಿಷೇಕ್ ಮನು ಸಿಂಫ್ಟಿ ಕೋರ್ಟ್ ಗಮನಕ್ಕೆ ತಂದರು. ಈ ಸಂದರ್ಭ ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ. ಅವಶ್ಯವಿದ್ದರೆ, ರಾಜ್ಯಪಾಲರು ತಮ್ಮ ಕಡತ ಸಲ್ಲಿಸಲು ಸಿದ್ಧರಿದ್ದಾರೆ ಎಂದು ಸಾಲಿಸಿಟರ್ ಜನರಲ್ ಪರ ವಕೀಲರಿಂದ ಹೈಕೋರ್ಟ್ಗೆ ಮಾಹಿತಿ ನೀಡಿದರು. ಅಲ್ಲದೆ ದೂರುದಾರ ಪ್ರದೀಪ್ ಕುಮಾರ್ ಕೂಡಾ ಆಕ್ಷೇಪಣೆ ಸಲ್ಲಿಸಿಲ್ಲ. ಇಬ್ಬರು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವುದಿಲ್ಲವೆಂದು ದಾಖಲಿಸಿ ಎಂದು ಹೈಕೋರ್ಟ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಫ್ಟಿ ಮನವಿ ಮಾಡಿದರು. ರಾಜ್ಯಪಾಲರ ಪರ ವಕೀಲರು, ರಾಜ್ಯಪಾಲರ ಆಕ್ಷೇಪಣೆಗೆ ಕಾಯದೇ ವಿಚಾರಣೆ ಮುಂದುವರಿಸಲು ಮನವಿ ಮಾಡಿದರು. ಹೀಗಾಗಿ ಕಾನೂನಿನ ಪ್ರಶ್ನೆಯಿರುವುದರಿಂದ ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ರಾಜ್ಯಪಾಲರು, ಪ್ರದೀಪ್ ಪರ ವಕೀಲರ ಹೇಳಿಕೆ ಹೈಕೋರ್ಟ್ ದಾಖಲಿಸಿದೆ. ವಾದ ಮುಂದುವರಿಸಿದ ಅಭಿಷೇಕ್ ಮನು ಸಿಂಫ್ಟಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಪಿ.ಸಿ.ಕಾಯ್ದೆ ೧೭ ೨ಡಿ ಪೂರ್ವಾನುಮತಿ ಬೇಕು. ೧೭ ಎ ಮಾನದಂಡ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ೧೭ ಎ ಬಗ್ಗೆ ನಾನು ವಾದಿಸಿದ್ದೆ. ಇದೊಂದೋ ಅಂಶದ ಆಧಾರದಲ್ಲಿ ರಾಜ್ಯಪಾಲರ ಆದೇಶ ರದ್ದುಪಡಿಸಬೇಕು. ಪೊಲೀಸ್ ಅಧಿಕಾರಿ ಅನುಮತಿ ಪಡೆಯದೇ ತನಿಖೆ ಮಾಡುವಂತಿಲ್ಲ. ಸಾರ್ವಜನಿಕ ಸೇವಕನ ಶಿಫಾರಸು, ನಿರ್ಧಾರಗಳ ಕುರಿತಾದ ತನಿಖೆ ಇರಬೇಕು. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ. ಸುಪ್ರೀಂಕೋರ್ಟ್, ಕರ್ನಾಟಕ ಹೈಕೋರ್ಟ್ನ ಆದೇಶಗಳಿವೆ. ಈ ಕುರಿತೂ ನಾನು ವಾದ ಮಂಡಿಸಲಿದ್ದೇನೆ. ಪ್ರತಿವಾದಿ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಆಕ್ಷೇಪಣೆ ಗಮನಿಸಬೇಕು ಎಂದರು.

ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದು ಅಧಿಕಾರಿಗಳು

ಬೆಂಗಳೂರು, ಆ. ೨೯: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬAಧಿಸಿ ವಿವಾದವೆದ್ದು ೧೨ ಮಂದಿ ಅಧಿಕಾರಿಗಳ ಅಮಾನತ್ತಿಗೂ ಕಾರಣವಾಗಿ ನಟ ದರ್ಶನ್‌ರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದ ವಿಚಾರಕ್ಕೆ ಸಂಬAಧಿಸಿದAತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ೮ ರಿಂದ ೧೦ ಜನರನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಶಿಫ್ಟ್ ಮಾಡಲಾಗಿದೆ. ಯಾರನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರೇ ನಿರ್ಧಾರ ಮಾಡಿದ್ದಾರೆ, ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ ಎಂದರು. ದರ್ಶನ್ ವಿಚಾರದಲ್ಲಿ ನಿಷ್ಠುರವಾಗಿ ಅಧಿಕಾರಿಗಳು ನಡೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದರು. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಅವರು ನಟ ದರ್ಶನ್‌ಗೆ ಆಪ್ತರು ಅದಕ್ಕಾಗಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆಯೇ ಎಂದು ಕೇಳಿದ್ದಕ್ಕೆ. ಪ್ರತಿ ಜಿಲ್ಲೆಗೂ ಒಬ್ಬ ಉಸ್ತುವಾರಿ ಸಚಿವರಿದ್ದಾರೆ. ಯಾರೇ ಇದ್ದರೂ ಪರವಾಗಿಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ, ಸಚಿವ ಜಮೀರ್‌ಗೂ ನಟ ದರ್ಶನ್ ನನ್ನು ಬಳ್ಳಾರಿ ಕಾರಾಗೃಹಕ್ಕೆ ಕಳುಹಿಸಿದ್ದಕ್ಕೂ ಯಾವುದೇ ಸಂಬAಧವಿಲ್ಲ ಎಂದರು.

ಗದೆ, ಧನಸ್ಸು ಹೋಲುವ ದೀಪದ ಕಂಬ ತೆರವಿಗೆ ಆದೇಶ!

ಗಂಗಾವತಿ, ಆ. ೨೯: ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿದೆ ಎಂಬ ಆರೋಪದ ಮೇರೆಗೆ ಗಂಗಾವತಿಯ ಅಂಜನಾದ್ರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹನುಮನ ಗದೆ, ರಾಮನ ಧನಸ್ಸು ಹೋಲುವ ದೀಪದ ಕಂಬಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. ಗಂಗಾವತಿಯಿAದ ಅಂಜನಾದ್ರಿ ಬೆಟ್ಟಕ್ಕೆ ಸಾಗುವ ರಸ್ತೆ ಮಧ್ಯೆ ಹಾಕಿರುವ ಬಿಲ್ಲು, ಬಾಣಗಳ ಮಾದರಿಯ ಆಕರ್ಷಕ ವಿದ್ಯುತ್ ಕಂಬಗಳು ಕೋಮು ಭಾವನೆಗೆ ಕಾರಣವಾಗುತ್ತಿದೆ ಎಂಬ ಆಕ್ಷೇಪಕ್ಕೆ ತಹಶೀಲ್ದಾರ್ ಸ್ಪಂದಿಸಿದ್ದು ಅವುಗಳನ್ನು ತೆರವುಗೊಳಿಸಲು ಆದೇಶ ಮಾಡಿದ್ದಾರೆ. ವಿದ್ಯುತ್ ಕಂಬಗಳನ್ನು ತೆರವಿಗೆ ಸೂಚಿಸಿದ್ದಲ್ಲದೆ, ಇವನ್ನು ಹಾಕಿರುವ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್ ಐಡಿಎಲ್) ವಿರುದ್ಧವೇ ಪ್ರಕರಣ ದಾಖಲಿಸಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಜನಾರ್ದನ ರೆಡ್ಡಿ ಅವರು ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು. ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿAದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಸಿಎಂ ಸಿದ್ದರಾಮಯ್ಯ ಪತ್ನಿ, ಕಾಂಗ್ರೆಸ್ ವಕ್ತಾರ ಎಂ. ಲಕ್ಷö್ಮಣ ವಿರುದ್ಧ ದೂರು

ಮೈಸೂರು, ಆ. ೨೯: ಮುಡಾ ಹಗರಣದಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ, ಮೂಲ ದಾಖಲಾತಿ ನಾಶಪಡಿಸಿ, ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಕ್ತಾರ ಎಂ. ಲಕ್ಷö್ಮಣ ವಿರುದ್ಧ ಲಕ್ಷಿö್ಮÃಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ೧೪ ನಿವೇಶನಗಳನ್ನು ಅಕ್ರಮವಾಗಿ ಪಡೆಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ಈ ಹಿಂದೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದಾರೆ. ಜುಲೈ ೨೬, ೨೦೨೪ ರಂದು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಪತ್ನಿ ಪಾರ್ವತಿ ಅವರು ಜೂನ್ ೨೩, ೨೦೧೪ ರಂದು ಮುಡಾ ಆಯುಕ್ತರಿಗೆ ಬರೆದ ಪತ್ರವನ್ನು ಬಿಡುಗಡೆ ಮಾಡಿದ್ದಾರೆ ಎಂದು ಕೃಷ್ಣ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಪತ್ರದ ಎರಡನೇ ಪುಟದಲ್ಲಿ ಕೆಲವು ಪದಗಳನ್ನು ಅಸ್ಪಷ್ಟಗೊಳಿಸಲು ವೈಟ್ನರ್ ಬಳಸಿರುವುದು ತೀವ್ರ ಅನುಮಾನಕ್ಕೆ ಕಾರಣವಾಗಿತ್ತು. ಪತ್ರಿಕಾಗೋಷ್ಠಿಯ ನಂತರ, ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ ೨೬, ೨೦೨೪ ರಂದು ವೀಡಿಯೋ ಕ್ಲಿಪ್‌ವೊಂದನ್ನು ಟ್ವೀಟ್ ಮಾಡಿ, ವೈಟ್ನರ್ ಹಿಂದೆ ಏನಿತ್ತು ಎಂಬುದನ್ನು ವಿವರಿಸಿದ್ದರು. ಅದರಲ್ಲಿರುವ ಪಾರ್ವತಿ ಅವರ ಸಹಿಗೂ ನಾವು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಅದೇ ಪತ್ರದಲ್ಲಿರುವ ಸಹಿಗೂ ವ್ಯತ್ಯಾಸಗಳಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.