ಕೂಡಿಗೆ, ಆ. ೨೮: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಯ ಸಭೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಡಿವೈಎಸ್‌ಪಿ ಆರ್. ವಿ. ಗಂಗಾಧರಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಆಚರಣಾ ಸಮಿತಿಯವರು ಅನುಸರಿಸಬೇಕಾದ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ಮತ್ತು ಅವುಗಳನ್ನು ನಿಯಮಾನುಸಾರ ಪಾಲನೆ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಮೋಹನ್ ರಾಜ್ ನವರು ಗಣೇಶೋತ್ಸವ ಸಮಿತಿಯವರಿಗೆ ಗಣೇಶನ ವಿಗ್ರಹ ಪ್ರತಿಷ್ಟಾಪನೆ ಮತ್ತು ವಿಸರ್ಜನೆಯ ಸಂದರ್ಭದಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಪಾಲನೆ ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.