ಮಡಿಕೇರಿ, ಆ. ೨೮: ಪ್ರಸಕ್ತ ಸಾಲಿನ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಹೆಚ್‌ಐವಿ-ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ತಾ. ೩೧ ರಂದು ನಡೆಯಲಿದೆ.

ಬೆಳಿಗ್ಗೆ ೭.೩೦ ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಣದಲ್ಲಿ ಉದ್ಘಾಟನೆಗೊಂಡು ಮ್ಯಾರಥಾನ್ ಸ್ಪರ್ಧೆಯು ಜನರಲ್ ತಿಮ್ಮಯ್ಯ ಕ್ರೀಡಾಂಗಣದಿAದ ಪ್ರಾರಂಭವಾಗಿ ನಗರದ ಪ್ರಮುಖ ವೃತ್ತ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತ, ಜನರಲ್ ತಿಮ್ಮಯ್ಯ ವೃತ್ತ (ಜಿ.ಟಿ. ಸರ್ಕಲ್), ಮಂಗೇರೀರ ಮುತ್ತಣ್ಣ ವೃತ್ತ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ತಲುಪಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.