ಮಡಿಕೇರಿ, ಆ.೨೯ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಜಿ. ಮೋಹನ್ ದಾಸ್ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಿತಿಯ ಸದಸ್ಯರು ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಸಂಬAಧಪಟ್ಟ ಇಲಾಖೆಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಕುಂದುಕೊರತೆ ಸಭೆಯನ್ನು ನಡೆಸಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲಾ ಸದಸ್ಯರು ಮುಂದಾಗಬೇಕು. ಈ ಪ್ರಯತ್ನಕ್ಕೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾಮಟ್ಟದ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಪಡೆಯಲಾಗುವುದು ಎಂದು ತಿಳಿಸಿದರು. ಸಮಿತಿಯ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.