ಮಡಿಕೇರಿ, ಆ. ೨೯ : ಇಲ್ಲಿನ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಹೊರಡಿಸಿರುವ ಮೀಸಲಾತಿ ಕ್ರಮ ಸರಿ ಇಲ್ಲ ಎಂದು ಆಕ್ಷೇಪಿಸಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ತಡೆಯಾಜ್ಞೆ ದೊರಕಿದೆ.

ಕೆಲ ದಿನಗಳ ಹಿಂದೆ ಅರ್ಜಿ ಸಲ್ಲಿಸಿರುವ ನಂದಕುಮಾರ್ ಪರಿಶಿಷ್ಟ ಜಾತಿ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಿಡಬೇಕೆಂದು ಉಲ್ಲೇಖಿಸಿ ದ್ದಾರೆ. ಈ ಸಂಬAಧ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಚುನಾ ವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ನಗರಸಭಾ ಸದಸ್ಯ ಅರುಣ್ ಶೆಟ್ಟಿ ಕೂಡ ಮೀಸಲಾತಿ ಕ್ರಮ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತಂದಿದ್ದರು.