ಮಡಿಕೇರಿ, ಆ. ೨೯: ರಾಜಕೀಯ ಉದ್ದೇಶಕ್ಕೆ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರಿಂದ ಆಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ರಾಜ್ಯಪಾಲ ಹುದ್ದೆ ರದ್ದತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಸಹಕಾರ್ಯದರ್ಶಿ ಹೆಚ್.ಎಂ. ಸೋಮಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಸಿಪಿಐ ತಾಲೂಕು ಕಾರ್ಯದರ್ಶಿ ಸಬನಾ, ಎಐಟಿಯುಸಿ ಸಲಹೆಗಾರ ಶೇಷಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.