ಸೋಮವಾರಪೇಟೆ,ಆ.೨೯: ೨೦೨೪-೨೫ನೇ ಸಾಲಿನಲ್ಲಿ ಸರ್ಕಾರದ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದ ಮೂಲಕ ಸಹಾಯಧನದಡಿ ಕೃಷಿ ಉಪಕರಣಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ರೈತರಿಗೆ ಶೇ.೫೦ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.೯೦ರ ರಿಯಾಯಿತಿಯಲ್ಲಿ ಮಿನಿ ಟ್ರಾö್ಯಕ್ಟರ್, ಪವರ್ ಟಿಲ್ಲರ್, ರೋಟವೇಟರ್, ಕಳೆಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪೆçÃಯರ್, ಡೀಸೆಲ್ ಪಂಪ್‌ಸೆಟ್, ಫ್ಲೋರ್‌ಮಿಲ್, ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು, ಅಡಿಕೆ ತಟ್ಟೆ ಮಾಡುವ ಯಂತ್ರಗಳು, ರಾಗಿ ಕ್ಲೀನಿಂಗ್ ಮಿಷಿನ್, ರಾಗಿ ಮಿಲ್ ಮತ್ತು ಇತರೆ ಹೈಟೆಕ್ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರು ತಮ್ಮ ಕೃಷಿ ಭೂಮಿಯ ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.೧೦೦ರ ಛಾಪಾ ಕಾಗದದೊಂದಿಗೆ ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ತಿಳಿಸಿದ್ದಾರೆ.