ಕುಶಾಲನಗರ, ಆ. ೩೦ : ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಫಾತಿಮ ಪ್ರೌಢಶಾಲಾ ಮೈದಾನದಲ್ಲಿ ರಾಷ್ಟಿçÃಯ ಕ್ರೀಡಾ ದಿನಾಚರಣೆ ಹಾಗೂ ಕುಶಾಲನಗರ "ಬಿ" ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಸರ್ಕಾರಿ ಜೂನಿಯರ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಪ್ರತಿ ವರ್ಷ ಆಗಸ್ಟ್ ೨೯ ರಂದು, ಹಾಕಿ ದಂತಕಥೆ ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ನೆನಪಿಗಾಗಿ ಭಾರತವು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ವ್ಯವಸ್ಥಾಪಕÀ ಫಾ. ಎಂ. ಮಾರ್ಟಿನ್ ಅವರು, ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕ್ರೀಡಾಜ್ಯೋತಿ ಬೆಳಗಿಸಿದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಮಾತನಾಡಿ, ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು.

ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ'ಸಿಲ್ವ, ಕ್ರೀಡಾಕೂಟದ ಕಾರ್ಯದರ್ಶಿ ಎ.ಎ.ಲಕ್ಷö್ಮಣ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮೌಲಾನ ಅಜಾದ್ ಶಾಲೆಯ ಪ್ರಾಂಶುಪಾಲೆ ಶ್ವೇತ, ಸಿ.ಆರ್.ಪಿ. ಟಿ.ಇ.ವಿಶ್ವನಾಥ್, ಪ್ರೌಢಶಾಲಾ ಪೋಷಕರ ಪ್ರತಿನಿಧಿ ಕುಮಾರ್, ಶಿಕ್ಷಕರ ಸಂಘಟನೆಯ ಪ್ರಮುಖರಾದ ದಯಾನಂದ ಪ್ರಕಾಶ್, ಎಂ.ಎಸ್. ಮಹೇಂದ್ರ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಪ್ರೆಸ್‌ಕ್ಲಬ್ ಟ್ರಸ್ಟ್ ಅಧ್ಯಕ್ಷ ಎಚ್.ಎಂ. ರಘು, ಶಿರಂಗಾಲ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶೈಲಾ, ಫಾತಿಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್, ವಿವಿಧ ಶಾಲೆಗಳ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಪೋಷಕರು ಇದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಪಲ್ಲೇದ್, ದೈಹಿಕ ಶಿಕ್ಷಣ ಶಿಕ್ಷಕ ಎ.ಎ.ಲಕ್ಷö್ಮಣ್, ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪ, ಸಿ ಆರ್ ಪಿ ಟಿ.ಇ. ವಿಶ್ವನಾಥ್, ಪೋಷಕರ ಪ್ರತಿನಿಧಿ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಿದ್ಯಾರ್ಥಿಗಳು ತಮ್ಮನ್ನು ಸ್ವಯಂ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಫಾತಿಮ ಪ್ರೌಢಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಹೂಪ್ಸ್ ನೃತ್ಯ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.