ಸೋಮವಾರಪೇಟೆ, ಆ. ೩೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ನಡೆಯಿತು.

ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಅವರು, ಸತ್ಯ, ನ್ಯಾಯ, ಧರ್ಮಪರಿಪಾಲನೆಯ ಮೂಲಕ ಸಮಾಜ ಸುಧಾರಣೆಗೆ ಪ್ರಯತ್ನಿಸುವ ವ್ಯಕ್ತಿ ಅಥವಾ ಸಂಸ್ಥೆಯನ್ನು ಸಮಾಜವೇ ಗೌರವಿಸುತ್ತದೆ ಎಂದು ಅಭಿಪ್ರಾಯಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿ, ಇಂದು ಯಾವುದೇ ಸರಕಾರಗಳು ಮಾಡದ ಕೆಲವೊಂದು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿದೆ. ಅದರಲ್ಲೂ ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ಮೂಲಕ ಸ್ತಿçà ಶಕ್ತಿಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.

ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾಭವನ ಟ್ರಸ್ಟ್ನ ಅಧ್ಯಕ್ಷ ಎಸ್.ಮಹೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹೆಚ್. ರೋಹಿತ್ ಮಾತನಾಡಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ಸೋಮೇಶ್, ಸುರೇಶ್, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ಉಪಸ್ಥಿತರಿದ್ದರು. ಇದೇ ಸಂದರ್ಭ ಬಜೆಗುಂಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಯೋಜನೆ ವತಿಯಿಂದ ೨,೫೦,೦೦೦ ರೂ.ಗಳನ್ನು ಪೂರಕ ಸಹಾಯಧನ ಮಂಜೂರು ಮಾಡಲಾಯಿತು.