ಮಡಿಕೇರಿ, ಆ. ೩೦: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು-ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟು ಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಅದರಂತೆ ೨೦೨೩ನೇ ಸಾಲಿನ ಹಿರಿಯ ಕ್ರೀಡಾಪಟು, ತರಬೇತು ದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ಪ್ರಶಸ್ತಿಗೆ ಸೇವಾಸಿಂಧು ಆನ್‌ಲೈನ್ ವೆಬ್‌ಸೈಟ್ hಣಣಠಿ://sevಚಿsiಟಿಜhuseಡಿviಛಿes. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://sevಚಿsiಟಿಜhuseಡಿviಛಿes. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ ಸೆಪ್ಟೆಂಬರ್ ೨೦ ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೦೯೮೬ ಮತ್ತು ೯೪೮೦೦೩೨೭೧೨ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.