ಪ್ಯಾರಿಸ್ (ಫ್ರಾನ್ಸ್), ಆ. ೩೦: ಪ್ರಸ್ತುತ ನಡೆಯುತ್ತಿರುವ ೨೦೨೪ ರ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕದ ಮೂಲಕ ಭಾರತ ಖಾತೆ ತೆರೆದಿದೆ. ಮಹಿಳಾ ಶೂಟರ್ ಅವನಿ ಲೇಖಾರಾ ಅವರು ೧೦ ಮೀಟರ್ ಏರ್‌ರೈಫಲ್ ಸ್ಟಾö್ಯಂಡಿAಗ್ ಎಸ್‌ಎಸ್ ೧ ರಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೊರ್ವ ಶೂಟರ್ ಮೋನಾ ಅಗರ್ವಾಲ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಅವನಿ ಲೇಖಾರಾ ಅವರು ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದ್ದರು. ಆದರೆ, ಫೈನಲ್ ಸುತ್ತಿನಲ್ಲಿ ಅವರು ಪ್ರದರ್ಶನವನ್ನು ಇನ್ನಷ್ಟು ಉತ್ತಮ ಪಡಿಸಿಕೊಂಡರು. ಆ ಮೂಲಕ ೨೪೯.೭ ಅಂಕಗಳೊAದಿಗೆ ಚಿನ್ನದ ಪದಕಕ್ಕೆ ಗುರಿ ಇಡುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕೊರಿಯಾ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.

ಪ್ಯಾರಾಲಿಂಪಿಕ್ಸ್ನಲ್ಲಿ ಅವನಿ ಲೇಖಾರಾ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ. ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿಯೂ ಇದೇ ಸ್ಪರ್ಧೆಯಲ್ಲಿ ಅವರು ಚಿನ್ನದ ಪದಕವನ್ನು ಗೆದ್ದಿದ್ದರು. ಇದಲ್ಲದೆ, ಅವರು ಟೋಕಿಯೊದಲ್ಲಿ ೫೦ ಮೀಟರ್ ರೈಫಲ್ ಮೂರನೇ ಸ್ಥಾನ ಪಡೆದು ಕಂಚಿನ ಪದಕವನ್ನು ಗೆದ್ದಿದ್ದರು. ಅವರ ವಯಸ್ಸು ಕೇವಲ ೨೨ ವರ್ಷ.

ಅವನಿ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ. ಇದೀಗ ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಪೈಕಿ ದೇವೇಂದ್ರ ಜಜಾರಿಯಾ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ೨೦೦೪ ಮತ್ತು ೨೦೧೬ರ ಒಲಿಂಪಿಕ್ಸ್ನಲ್ಲಿ ಅವರು ಈ ಸಾಧನೆ ಮಾಡಿದ್ದರು. ಈ ಗೆಲುವಿನೊಂದಿಗೆ ಅವನಿ ಲೇಖಾರಾ ಪ್ಯಾರಾಲಿಂಪಿಕ್ಸ್ನಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅವರು ಒಟ್ಟು ೨೪೯.೭ ಅಂಕಗಳೊAದಿಗೆ ಚಿನ್ನದ ಪದಕವನ್ನು ಗೆದ್ದಿದ್ದಾರೆ.

ಕಂಚು ಗೆದ್ದ ಪ್ರೀತಿ ಪಾಲ್

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ೨೦೨೪ ರಲ್ಲಿ ಮಹಿಳೆಯರ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರು ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಮೊದಲ ದಿನವೇ ಭಾರತದ ಪದಕಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮಹಿಳೆಯರ ೧೦೦ ಮೀಟರ್ ಟಿ೩೫ ಸ್ಪರ್ಧೆಯ ಫೈನಲ್‌ನಲ್ಲಿ ಪ್ರೀತಿ ಪಾಲ್ ಅವರು ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಟ್ರ‍್ಯಾಕ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಲ್ ಅವರು ೧೦೦ ಮೀಟರ್ಸ್ ಸ್ಪರ್ಧೆಯಲ್ಲಿ ೧೪.೨೧ ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಕಂಚಿನ ಪದಕವನ್ನು ಪಡೆದರು. ೧೭ನೇ ಆವೃತ್ತಿಯ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.