ಸೋಮವಾರಪೇಟೆ ,ಆ.೩೦ : ಸೋಮವಾರಪೇಟೆ - ಶನಿವಾರಸಂತೆ ರಾಜ್ಯ ಹೆದ್ದಾರಿ ನಡುವಿನ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಸಮೀಪದ ಹೆದ್ದಾರಿ ಬದಿಯಲ್ಲಿ ಅನಾಗರಿಕ ಮಂದಿ ಕಸ ಸುರಿಯುತ್ತಿದ್ದು, ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಇಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ ತಿಳಿಸಿದ್ದಾರೆ.

ರಾಜ್ಯ ಹೆದ್ದಾರಿ ನಡುವೆ ರಸ್ತೆಯ ಇಕ್ಕೆಲಗಳಲ್ಲಿ ಕಸವನ್ನು ಸುರಿಯಬಾರದೆಂದು ಗ್ರಾಮ ಪಂಚಾಯಿತಿಯಿAದ ನಾಮಫಲಕ ಅಳವಡಿಸಿದ್ದರೂ ಸಹ, ಕೆಲವರು, ಪಟ್ಟಣದಿಂದ ದಿನನಿತ್ಯ ವಾಹನದ ಮೂಲಕ ಆಗಮಿಸಿ ಕಸ ಎಸೆದು ಹೋಗುತ್ತಿದ್ದಾರೆ.

ಇದೆ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಮಕ್ಕಳು ತೆರಳುತ್ತಿದ್ದು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗುವುದು ಎಂದು ನತೀಶ್ ತಿಳಿಸಿದ್ದಾರೆ.