ಮಡಿಕೇರಿ, ಆ. ೩೧: ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ಇವರ ವತಿಯಿಂದ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ ೬ ರಂದು ಬೆಳಗ್ಗೆ ೯ ರಿಂದ ೧೦.೩೦ ಗಂಟೆಯವರೆಗೆ ನಡೆಯಲಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಗೌಡಳ್ಳಿ ವಿಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷರಾದ ಎಚ್.ಆರ್. ಸುರೇಶ್ ಇತರರು ಪಾಲ್ಗೊಳ್ಳಲಿದ್ದಾರೆ.