ಮುಳ್ಳೂರು, ಆ. ೩೧: ಸಮೀಪದ ಆಲೂರುಸಿದ್ದಾಪುರ ವಿಜಯ ಯುವಕ ಸಂಘದ ವತಿಯಿಂದ ಸೆ ೩ ರಂದು ಕೈಲ್ ಮಹೂರ್ತ ಹಬ್ಬದ ಪ್ರಯುಕ್ತ ಆಲೂರುಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಗ್ರಾಮೀಣ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿರುವ ಕ್ರೀಡಾಕೂಟವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಉದಯ್‌ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್, ಸರಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಕೆ.ಆರ್. ಭಾರತಿ, ವಿಜಯ ಯುವಕ ಸಂಘದ ಗೌರವಾಧ್ಯಕ್ಷ ಕುಯ್ಯಮುಡಿ ರಮೇಶ್, ಆಲೂರು ಸಿದ್ದಾಪುರ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಮತ್ತಿತರರು ಭಾಗವಹಿಸಲಿದ್ದಾರೆ. ಸಂಜೆ ೪ ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜಯ ಯುವಕ ಸಂಘದ ಅಧ್ಯಕ್ಷ ರಕ್ಷಿತ್ ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಭಟ್ಯನ ಈರಪ್ಪ, ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್, ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಸಂಸದ ಪ್ರತಾಪ್‌ಸಿಂಹ, ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಜೆ.ಎಸ್. ವಿರೂಪಾಕ್ಷಯ್ಯ, ಶನಿವಾರಸಂತೆ ಪೊಲೀಸ್ ವೃತ್ತ ನಿರೀಕ್ಷಕ ಪ್ರೀತಂದತ್ತ ಶ್ರೇಯಕರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ಕ್ರೀಡಾಕೂಟದಲ್ಲಿ ಪುರುಷರಿಗೆ ೫ ಕಿ.ಮೀ.ಗುಡ್ಡಗಾಡು ಓಟ, ಪುರುಷ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಹಾಗೂ ಭಾರದ ಗುಂಡು ಎಸೆತ, ಪುರುಷ ಮತ್ತು ಮಹಿಳೆಯರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯವ ಸ್ಪರ್ಧೆ, ಪುರುಷರಿಗೆ ೧೫೦೦ ಮೀ ಓಟದ ಸ್ಪರ್ಧೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ವಿಜಯ ಯುವಕ ಸಂಘದ ಪ್ರಕಟಣೆ ತಿಳಿಸಿದೆ.