ಕುಶಾಲನಗರ, ಸೆ. ೨: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ವತಿಯಿಂದ ೨೫ ಮಂದಿ ಪತ್ರಾಂಕಿತ ಅಧಿಕಾರಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ ಆಡಳಿತ ಮಂಡಳಿಯೊAದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯು ಸುಸ್ಥಿರ ಅಭಿವೃದ್ಧಿ ಯೋಜನೆಗೆ ಕೈಗೊಂಡ ಕಾರ್ಯ ಕ್ರಮಗಳ ಬಗ್ಗೆ ಕ್ಷೇತ್ರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ ಸಮುದಾಯ ಕೇಂದ್ರಗಳು, ಕುಡಿಯುವ ನೀರಿನ ಮೂಲಗಳು, ಶುದ್ಧೀಕರಣ ಘಟಕಗಳು, ಕೃಷಿ ತೋಟಗಾರಿಕೆ ಸಂಬAಧಿತ ಕಾರ್ಯಕ್ರಮಗಳ ಅನುಷ್ಠಾನ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು. ನಂತರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊAದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕ್ಷೇತ್ರ ಭೇಟಿಯಿಂದ ಕಂಡುಬAದ ಅಂಶಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರೊಂದಿಗೆ ವಿಸ್ತೃತ ಚರ್ಚೆ ನಡೆದು ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ಕಾರ್ಯಕ್ರಮಗಳ ಬಗ್ಗೆ ತಂಡವು ಮೆಚ್ಚುಗೆಯನ್ನು ವ್ಯಕ್ತಪಡಿಸಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಾದಪ್ಪ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಕ್ರಮಗಳ ವಿವರ ಮಂಡಿಸಿದರು. ಕಾರ್ಯದರ್ಶಿ ಕುಮಾರಸ್ವಾಮಿ ಸ್ವಾಗತಿಸಿ, ವಂದಿಸಿದರು.