vಕೂಡಿಗೆ, ಸೆ. ೨: ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಣೆಕಟ್ಟೆಯ ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ೧೦,೫೦೦ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಅಣೆಕಟ್ಟೆಯ ಮುಂಭಾಗದಿAದ ಸೈರನ್ ಮಾಡುವ ಮೂಲಕ ಅಣೆಕಟ್ಟೆಯ ಕೆಳ ಭಾಗದ ಗ್ರಾಮಗಳಿಗೆ ಸೂಚನೆ ನೀಡಿ ನದಿಗೆ ನೀರನ್ನು ಹರಿಸಲಾಗುತ್ತಿದೆ. ಈ ಸಂದರ್ಭ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ಅಣೆಕಟ್ಟೆಯ ಉಸ್ತುವಾರಿ ಇಂಜಿನಿಯರ್ ಸಿದ್ದರಾಜ್ ಹಾಜರಿದ್ದರು.