ಮಡಿಕೇರಿ, ಸೆ. ೨: ಪ್ರಸಕ್ತ (೨೦೨೪-೨೫) ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರಡಿಯಲ್ಲಿ ಬರುವ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಎಲ್ಲಾ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾAಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಎಲ್ಲಾ ನಿಗಮಗಳ ಯೋಜನೆಯಡಿ ಅರ್ಜಿ ಸಲ್ಲಿಸಲು ತಾ.೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.