ಮಡಿಕೇರಿ, ಸೆ. ೨: ಮಡಿಕೇರಿಯ ಹೊಟೇಲ್ ಕೂರ್ಗ್ ಇಂಟರ್‌ನ್ಯಾಷನಲ್‌ನಲ್ಲಿ ಕೊಡಗು ಕೃಷಿ ಪರಿಕರ ಮಾರಾಟಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸೋಮವಾರಪೇಟೆಯ ವರ್ತಕ ಎಂ.ಆರ್. ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಸೋಮಶೇಖರ್ ಹಾಗೂ ಜಾಗೃತದಳದ ಸಹಾಯಕ ನಿರ್ದೇಶಕರಾದಂತ ನಾಗೇಂದ್ರ ಅವರು ಉಪಸ್ಥಿತರಿದ್ದು, ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನಿನ ಮಾರ್ಪಾಡಿನ ಬಗ್ಗೆ ಹಾಗೂ ಇತರ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಂಘದ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ರಾಮಕೃಷ್ಣ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷರಾದ ಎಸ್.ಜೆ. ಶ್ರೀನಿವಾಸ ವಂದನಾರ್ಪಣೆ ಮಾಡಿದರು.