ಸಿಎಂ ಅರ್ಜಿ ವಿಚಾರಣೆ ಸೆಪ್ಟೆಂಬರ್ ೯ಕ್ಕೆ ಮುಂದೂಡಿಕೆ

ಬೆAಗಳೂರು, ಸೆ. ೨: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ೯ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಿಚಾರಣೆ ನಡೆಯಿತು. ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಸುದೀರ್ಘ ವಾದ ಮಂಡಿಸಿದ ಬಳಿಕ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ಅವರು ವಾದಮಂಡಿಸಿದರು. ರಾಘವನ್ ಅವರು ಸುದೀರ್ಘ ವಾದ ಮಂಡಿಸಿದ ಬಳಿಕ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಸಚಿವ ಸಂಪುಟದ ನಿರ್ಣಯದ ಬಗ್ಗೆ ವಾದ ಮಂಡಿಸಬೇಕಿದೆ. ಆದರೆ ಈ ವಾರಾಂತ್ಯ ಹಬ್ಬದ ರಜೆಗಳಿವೆ. ಹೀಗಾಗಿ ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದರು. ಎಜಿ ಶಶಿಕಿರಣ್ ಶೆಟ್ಟಿ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಹಬ್ಬಕ್ಕೂ ಮೊದಲೇ ವಾದಮಂಡನೆ ಮುಗಿಸಿಬಿಡಿ ಎಂದರು. ಆದರೆ ಅಡ್ವೊಕೆಟ್ ಜನರಲ್ ವಾದಿಸಿದ ಮೇಲೆ ನಾನು ವಾದಿಸುತ್ತೇನೆ. ಸೆಪ್ಟೆಂಬರ್ ೯ ಅಥವಾ ೨೧ ರಂದು ನಾನು ವಾದಿಸುತ್ತೇನೆ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಅಷ್ಟು ದೂರದ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಸೆಪ್ಟೆಂಬರ್ ೯ಕ್ಕೆ ಮುಂದೂಡಿದರು.

೧೫೦೦ ಹೆಚ್ಚುವರಿ ಬಸ್, ಮುಂಗಡ ಬುಕ್ಕಿಂಗ್‌ಗೆ ಶೇ.೧೦ರಷ್ಟು ರಿಯಾಯಿತಿ

ಬೆಂಗಳೂರು, ಸೆ. ೨: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿAದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಸೆಪ್ಟೆಂಬರ್ ೫ ರಿಂದ ೧೦ ರ ವರೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ ೫ ರಿಂದ ಬೆಂಗಳೂರಿನಿAದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ ೧,೫೦೦ ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್ ಆರ್ ಟಿಸಿ ಸೋಮವಾರ ತಿಳಿಸಿದೆ. ಸೆಪ್ಟೆಂಬರ್ ೬ರಂದು ಶುಕ್ರವಾರ ಗೌರಿ ಹಬ್ಬ, ೭ರಂದು ಶನಿವಾರ ಗಣೇಶ ಚತುರ್ಥಿ ಹಾಗೂ ೮ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸಪ್ಟೆಂಬರ್ ೫ ರಿಂದ ೧೦ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಪ್ರಕಾರ, ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಕಲಬುರಗಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ.ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.ಬಿಎಂಟಿಸಿ ಬಸ್ ನಿಲ್ದಾಣ, ಶಾಂತಿನಗರ (ಟಿಟಿಎಂಸಿ)ದಿAದ ಮಧುರೈ, ಕುಂಭಕೋಣA, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಖೋಝಿಕೋಡ್ ಮತ್ತು ತಮಿಳುನಾಡು ಹಾಗೂ ಕೇರಳ ರಾಜ್ಯದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯರ್ ವಿಶೇಷ ಬಸ್‌ಗಳು ಕಾರ್ಯನಿರ್ವಹಿಸಲಿವೆ. ವಿಶೇಷ ಮತ್ತು ನಿಗದಿತ ಬಸ್‌ಗಳಿಗೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯನ್ನು ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿನ ಕೌಂಟರ್‌ಗಳ ಮೂಲಕ ಬುಕ್ ಮಾಡಬಹುದು. ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರ ಟಿಕೆಟ್‌ಗಳನ್ನು ಬುಕ್ ಮಾಡಿದರೆ ಪ್ರಯಾಣ ದರದಲ್ಲಿ ಶೇಕಡಾ ೫ ರಷ್ಟು ರಿಯಾಯಿತಿ ನೀಡಲಾಗುವುದು ಮತ್ತು ಹಿಂತಿರುಗುವ ಪ್ರಯಾಣದ ಟಿಕೆಟ್‌ಗಳನ್ನು ಏಕಕಾಲದಲ್ಲಿ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣದ ಟಿಕೆಟ್‌ನಲ್ಲಿ ಶೇಕಡಾ ೧೦ ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎ???ರ್ ಟಿಸಿ ತಿಳಿಸಿದೆ.