ಕೂಡಿಗೆ, ಸೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಛತ್ರಿ ಮತ್ತು ಬ್ಯಾಗ್ ಅನ್ನು ವಿತರಣೆ ಮಾಡಿದರು.
ಒಟ್ಟು ೮ ಆಶಾ ಕಾರ್ಯಕರ್ತರಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ ಮಾಡಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕೊರೊನಾ ಸಂದರ್ಭದಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಹಾಗೂ ಇನ್ನಿತರ ಕಾಯಿಲೆಗಳು ಹರಡದಂತೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಛತ್ರಿ ಹಾಗೂ ಬ್ಯಾಗನ್ನು ಗ್ರಾಮ ಪಂಚಾಯಿತಿ ವತಿಯಿಂದ ವಿತರಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಶಿಕ, ಸದಸ್ಯರಾದ ಕೆ.ಕೆ. ಭೋಗಪ್ಪ, ಗಿರೀಶ್, ಪಾರ್ವತಮ್ಮ ರಾಮೇಗೌಡ, ಖತೀಜ, ಚೈತ್ರ ಮಂಜುನಾಥ, ಶಿವಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.