ಸೋಮವಾರಪೇಟೆ, ಸೆ. ೨: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತÀ ಸದಸ್ಯ ಡಿ.ಎಂ. ಗೋಪಾಲಕೃಷ್ಣ ಅವರು ಆಯ್ಕೆಯಾಗಿ ದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರಮೀಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ೯ ಸದಸ್ಯ ಬಲದ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಗೋಪಾಲಕೃಷ್ಣ ಅವರು ೬ ಮತಗಳನ್ನು ಪಡೆದು ಗೆಲುವು ದಾಖಲಿಸಿದರೆ, ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅನುಕುಮಾರ್ ೩ ಮತಗಳನ್ನು ಪಡೆದರು.

ಈವರೆಗೆ ಮೂರು ಬಾರಿ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಅವರು, ಮೂರು ಅವಧಿಯಲ್ಲೂ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯರೆಂಬ ಹೆಗ್ಗಳಿಕೆಗೆ ಭಾಜನರಾದರು. ಚುನಾವಣಾ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಕಾರ್ಯನಿರ್ವಹಿಸಿದರು.

ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ರಶೀದ ಮತ್ತು ಸದಸ್ಯರು, ಪ್ರಮುಖರಾದ ಪೊನ್ನಪ್ಪ, ಶಿವಾನಂದ, ವಸಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.