ಸೋಮವಾರಪೇಟೆ, ಸೆ. ೨: ಇಲ್ಲಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿದ್ದ ಪಿ.ಎಸ್. ಸುರೇಶ್ ಅವರು ವಯೋ ನಿವೃತ್ತಿ ಹೊಂದಿದ್ದು, ಕಚೇರಿಯಲ್ಲಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಮಡಿಕೇರಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ರಾಜೇಶ್, ಮಡಿಕೇರಿ ಅಗ್ನಿಶಾಮಕ ಠಾಣಾಧಿಕಾರಿ ಶೋಭಿತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಜೋಯಪ್ಪ, ಸೋಮವಾರಪೇಟೆ, ಕುಶಾಲನಗರ ಅಗ್ನಿಶಾಮಕ ಠಾಣೆ ಹಾಗೂ ಗೋಣಿಕೊಪ್ಪ ಅಗ್ನಿಶಾಮಕ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.