ಮಡಿಕೇರಿ, ಸೆ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಮಡಿಕೇರಿ ನಗರದ ಚಾಮುಂಡೇಶ್ವರಿ ಅಂಗನವಾಡಿ ಕೇಂದ್ರದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇ ರಿಯ ಕಾರ್ಯಕ್ರಮ ಸಂಚಾಲಕರಾದ ಗರ್ಭಿಣಿ ಮಹಿಳೆ ಕಾವ್ಯ ಹಾಗೂ ಅಂಗನವಾಡಿ ಮಕ್ಕಳ ಪೋಷಕರು, ಅಂಗನವಾಡಿ ಕೇಂದ್ರದ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಶೀಲ ಅವರು ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಕಾರ್ಯಕ್ರಮ ಸಂಚಾಲಕ ರಾದ ಜಯಂತಿ, ನಿತಿನ್, ಎಂಎಸ್ ಡಬ್ಲ್ಯೂ ವಿದ್ಯಾರ್ಥಿಗಳು, ನಗರಸಭಾ ಮಾಜಿ ಸದಸ್ಯ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು ಮಕ್ಕಳ ತಾಯಂದಿರು, ಗರ್ಭಿಣಿಯರು, ಅಂಗನವಾಡಿ ಕಾರ್ಯಕರ್ತೆ ವಿಜಯ, ಸಹಾಯಕಿ ಯಶೋಧ ಹಾಜರಿದ್ದರು.