*ಗೋಣಿಕೊಪ್ಪ: ಸ್ವಾರ್ಥ ಜೀವನವನ್ನು ಬಿಟ್ಟು ಪರೋಪಕಾರಿಯಾಗಿ ಬದುಕು ನಡೆಸಬೇಕೆಂದು ಗೋಣಿಕೊಪ್ಪ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ತಿಳಿಸಿದರು.

ಕಾವೇರಿ ಕಾಲೇಜು ಸಭಾಂಗಣದಲ್ಲಿ ೨೦೨೪-೨೫ನೇ ಸಾಲಿನ ಎನ್.ಎಸ್.ಎಸ್ ಘಟಕದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪರೋಪಕಾರಿ ಹಿತ ಎಂಬAತೆ ಪ್ರಕೃತಿಯ ಮರ, ಗಿಡ, ನದಿ, ಸರೋವರ, ಪಾಣಿ, ಪಕ್ಷಿ ಎಲ್ಲವು ಇತರರ ಸೇವೆಗಾಗಿಯೇ ಇವೆ. ಮಾನವ ಮಾತ್ರ ಸ್ವಾರ್ಥ ಜೀವನ ಸಾಗಿಸುತ್ತಿದ್ದಾನೆ. ವಿದ್ಯಾರ್ಥಿಗಳು ಇದರಿಂದ ದೂರವಾಗಿ ಇತರರ ಸೇವೆಗೆ ಮುಡಿಪಾಗಿರಬೇಕು. ಎನ್.ಎಸ್.ಎಸ್ ಘಟಕದ ಮೂಲಕ ಸಮಾಜ ಸೇವೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕಿ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಕಾವೇರಿ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗೆ ಗೌರವ ಕೊಡುವುದನ್ನು ಎಂದಿಗೂ ಮರೆಯಬಾರದು. ಸಮಾಜ ಸೇವಾ ಮನೋಭಾವ ಬೆಳೆಸಿಕೊಂಡರೆ ಮಾತ್ರ ಇತರರ ಭಾವನೆಗೆ ಸ್ಪಂದನೆ ನೀಡಲು ಸಾಧ್ಯ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯ ವಿನೋದ್ ಮೂಡಗದ್ದೆ ಮಾತನಾಡಿ, ಎನ್.ಎಸ್.ಎಸ್ ಸಮಾಜಸೇವೆ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ವ್ಯಕ್ತಿತ್ವ ವಿಕಸನ ಮುಂತಾದವನ್ನು ಕಲಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಎನ್.ಎಸ್.ಎಸ್ ಅನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.

ಐ.ಕ್ಯೂ.ಎ.ಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ಎನ್.ಎಸ್.ಎಸ್ ಅಧಿಕಾರಿಗಳಾದ ವನಿತ್ ಕುಮಾರ್. ಎಂ.ಎನ್, ಎನ್.ಪಿ. ರೀತಾ ಇದ್ದರು.ಮಡಿಕೇರಿ: ಕೊಯಂಬತ್ತೂರಿನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ವೀರಾಜಪೇಟೆ ಕಾವೇರಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಅಪ್ಸರ ಜಯನ್ ಭಾಗವಹಿಸಿ, ಬಾಲಕಿಯರ ವಿಭಾಗದ ಕತಾದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಹಾಗೂ ಬಾಲಕಿಯರ ೧೮ ವಯೋಮಾನ ಕೆಳಪಟ್ಟ ವಿಭಾಗದ ಟೀಮ್ ಕತಾದಲ್ಲಿ ಎರಡನೇ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.ವೀರಾಜಪೇಟೆ: ಶಾಲೆಯಲ್ಲಿ ಪಾಠ ಮಾಡುವುದಕ್ಕಿಂತ ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ನಾಟಿ ಬೇಸಾಯದ ಕುರಿತ ಸಂಪೂರ್ಣ ಮಾಹಿತಿ ನೀಡಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂ ದಿಗೆ ಕನೆಕ್ಟಿಂಗ್ ಕೊಡವಾಸ್ ಬೊಳ್ಳರಿಮಾಡು ಗ್ರಾಮದ ಗದ್ದೆಯಲ್ಲಿ ಆಯೋಜಿಸಿದ್ದ ನಾಟಿಪಣಿ ಬೇಸಾಯ ಕಾರ್ಯಕ್ರಮದಲ್ಲಿ ವಿರಾಜಪೇ ಟೆಯ ಕಾವೇರಿ ಶಾಲೆಯ ೭ ಹಾಗೂ ೮ನೇ ತರಗತಿ ಬಾಲಕರು ಪಾಲ್ಗೊಂಡು ಅನುಭವ ಗಳಿಸಿದರು.

ಪುದಿಯೊಕ್ಕಡ ಸೂರಜ್ ಮತ್ತು ಪಾಲೆಂಗಡ ಅಮಿತ್ ನಾಟಿ ಹೇಗೆ ಮಾಡಬೇಕು ಎಂಬುದನ್ನು ತಾಳ್ಮೆಯಿಂದ ಮಕ್ಕಳಿಗೆ ತಿಳಿಹೇಳಿ, ಉತ್ತೇಜಿಸಿ ಪ್ರಾಯೋಗಿಕ ಕೆಲಸಕ್ಕೆ ತೊಡಗಿಸಿದರು.

ಈ ಸಂದರ್ಭ ಕಾವೇರಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ಅಮೃತ ಅರ್ಜುನ್ ಹಾಗೂ ಸಹ ಶಿಕ್ಷಕಿ ಭಾಗ್ಯ ಬಿ.ಡಿ. ಉಪಸ್ಥಿತರಿದ್ದರು.ಕೂಡಿಗೆ: ಗ್ರೀನ್ ಅಂಡ್ ಗ್ರೀನ್ ಇಂಡಿಯಾ ಅಂಡ್ ಇಂಟರ್ನ್ಯಾಷನಲ್ ಸಂಸ್ಥೆಯು ಕೂಡಿಗೆ ಆಂಗ್ಲ ಮಾಧ್ಯಮ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಉತ್ತಮ ಹಸಿರು ಶಾಲೆ ಪ್ರಶಸ್ತಿಯನ್ನು ನೀಡಲಾಯಿತು.

ಸಂಸ್ಥೆಯ ರಾಷ್ಟಿçÃಯ ಪ್ರಧಾನ ನಿರ್ದೇಶಕರಾದ ಡಾ. ಸಚ್ಚಿದಾನಂದ್ ಜಮದಗ್ನಿ ಅವರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಾವೆಲ್ಲರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಿ ಸಂರಕ್ಷಣೆ ಮಾಡುವ ಸಂಕಲ್ಪ ತೊಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಬಸವನಹಳ್ಳಿ ಧನಪಾಲ್ ಪಾಲ್ಗೊಂಡಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರೀನ್ ಅಂಡ್ ಗ್ರೀನ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಪುಟ್ಟರಾಜ ಕಮಟಗಿ ಪರಿಸರದ ಸಂರಕ್ಷಣೆಯ ಕಾರ್ಯದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿರುವ ಗ್ರೀನ್ ಅಂಡ್ ಗ್ರೀನ್ ಸಂಸ್ಥೆಯು "ಭೂಮಿಯ ಉಳಿವಿಗಾಗಿ ವೃಕ್ಷ" ಎಂಬ ಧ್ಯೇಯವನ್ನು ಹೊಂದಿದೆ. ಪ್ರಾಂಶು ಪಾಲ ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಕೋ ಕ್ಲಬ್ ಸಂಚಾಲಕರಾದ ಚಿದಂಬರ್ ಕಾರ್ಯಕ್ರಮ ನಿರೂಪಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶುಶ್ರೂಷಕರಾದ ಮೀನು ವಂದಿಸಿದರು.

ಈ ಸಂದರ್ಭ ಶಿಕ್ಷಕರಾದ ಆಸಿಫ್, ಜಗದೀಶ್, ತ್ರಿವೇಣಿ, ದಿನೇಶಾರ್ಚಾರಿ, ಗಾನವಿ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.vನಾಪೋಕ್ಲು: ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹ ಶಿಕ್ಷಕಿ ಎಂ.ಎ ಕಾವೇರಿಯಮ್ಮ ಅವರನ್ನು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎ.ಕೆ. ಮನುಮುತ್ತಪ್ಪ ವಹಿಸಿದ್ದರು. ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ, ನಿರ್ದೇಶಕ ಮುಕ್ಕಾಟಿರ ವಿನಯ್, ಆಡಳಿತ ಮಂಡಳಿ ಅಧ್ಯಕ್ಷ ಮನು ಮುತ್ತಪ್ಪ, ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ, ಸಂಚಾಲಕ ನುಚ್ಚಿಮಣಿಯಂಡ ಚಿಂಗಪ್ಪ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಮೂವೇರ ನಾಣಯ್ಯ, ಶಾಲೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.ನಾಪೋಕ್ಲು: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಇಲ್ಲಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

ಬಾಲಕರ ವಿಭಾಗದ ಹಾಕಿ ಪಂದ್ಯಾಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕರೆ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಚೆಸ್‌ನಲ್ಲಿ ಮಿಶ ಬಾ ಮತ್ತು ಸಿಂಚನ ಪೂವಯ್ಯ ತೃತೀಯ ಸ್ಥಾನ ಗಳಿಸಿದ್ದಾರೆ.

ಅಥ್ಲೆಟಿಕ್ಸ್ನಲ್ಲಿ ಕಿರೀತ್ ಸೋಮಯ್ಯ ೧೫೦೦ ಮೀಟರ್ ದ್ವಿತೀಯ ಸ್ಥಾನ, ಜಾವೆಲಿನ್ ತ್ರೋ ಪ್ರಥಮ ಸ್ಥಾನ, ಟ್ರಿಪಲ್ ಜಂಪ್ ದ್ವಿತೀಯ ಸ್ಥಾನ ಪಡೆದಿದ್ದರೆ ಕೇತನ್ ಕರುಂಬಯ್ಯ ೩೦೦೦ ಮೀ.ಓಟದ ಸ್ಪರ್ಧೆಯಲ್ಲಿ ಪ್ರಥಮ ೧೦೦ ಮೀಟರ್ ದ್ವಿತೀಯ, ಹೈಜಂಪ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೆ.ಎ ಆಕಾಶ್ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, ಲಾಂಗ್ ಜಂಪ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಕೃಪಾ ಡಿ.ಪಿ ೨೦೦ ಮೀಟರ್ ಪ್ರಥಮ, ೪೦೦ ಮೀಟರ್ ದ್ವಿತೀಯ, ಶಾಟ್‌ಪುಟ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಗಾನವಿ ಬಿ.ಎಂ. ೧೦೦ ಮೀಟರ್ ಪ್ರಥಮ, ಲಾಂಗ್ ಜಂಪ್ ಪ್ರಥಮ, ಟ್ರಿಪಲ್ ಜಂಪ್ ಪ್ರಥಮ ಸ್ಥಾನ ಗಳಿಸಿದ್ದಾಳೆ. ಶ್ರೇಯ ಪೂವಮ್ಮ ಹೈಜಂಪ್‌ನಲ್ಲಿ ಪ್ರಥಮ ಸ್ಥಾನವನ್ನು ದೇವಯ್ಯ ಪಿ.ಎಂ. ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಬಾಲಕರ ೪.೧೦೦ ಮೀ ದ್ವಿತೀಯ ಸ್ಥಾನ ಬಾಲಕಿಯರ ೪.೧೦೦ ಮೀಟರ್ ರಿಲೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರಥಮ ಸ್ಥಾನ ಗಳಿಸಿದ ತಂಡಗಳು ಹಾಗೂ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕುಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಪ್ರಾಂಶುಪಾಲರಾದ ಶಾರದಾ ಬಿ.ಎಂ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಕೆ ಸರಿತ ತರಬೇತಿ ನೀಡಿದ್ದರು.

ನಾಪೋಕ್ಲು: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಕೌಶಲ್ಯಗಳನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ. ಧನಂಜಯ ಹೇಳಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಇತ್ತೀಚೆಗೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಡಿ ನೀತಾ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿಗೆ ಹೆಸರಾದ ಸಂಸ್ಥೆಯಾಗಿದೆ ಎಂದರು.

ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು ಮಾತನಾಡಿ, ಸ್ಥಳೀಯ ಸಂಸ್ಥೆಯಲ್ಲಿ ರಾಜ್ಯ ಸಂಸ್ಥೆಯ ನಿಗದಿತ ಕಾರ್ಯಕ್ರಮಗಳಲ್ಲದೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ .ಮಕ್ಕಳನ್ನು ಪ್ರಥಮ, ದ್ವಿತೀಯ ಸೋಪಾನ ಹಾಗೂ ಜಿಲ್ಲೆಯಲ್ಲಿ ನಡೆಯುವ ತೃತೀಯ ಸೋಪಾನ ಪರೀಕ್ಷೆಗೆ ಸಿದ್ಧಗೊಳಿಸಿ ನಮ್ಮ ಜಿಲ್ಲೆಯಿಂದ ಹೆಚ್ಚು ಮಕ್ಕಳನ್ನು ರಾಜ್ಯಮಟ್ಟದಲ್ಲಿ ನಾಪೋಕ್ಲು: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಕೌಶಲ್ಯಗಳನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ. ಧನಂಜಯ ಹೇಳಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಇತ್ತೀಚೆಗೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಡಿ ನೀತಾ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿಗೆ ಹೆಸರಾದ ಸಂಸ್ಥೆಯಾಗಿದೆ ಎಂದರು.

ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು ಮಾತನಾಡಿ, ಸ್ಥಳೀಯ ಸಂಸ್ಥೆಯಲ್ಲಿ ರಾಜ್ಯ ಸಂಸ್ಥೆಯ ನಿಗದಿತ ಕಾರ್ಯಕ್ರಮಗಳಲ್ಲದೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ .ಮಕ್ಕಳನ್ನು ಪ್ರಥಮ, ದ್ವಿತೀಯ ಸೋಪಾನ ಹಾಗೂ ಜಿಲ್ಲೆಯಲ್ಲಿ ನಡೆಯುವ ತೃತೀಯ ಸೋಪಾನ ಪರೀಕ್ಷೆಗೆ ಸಿದ್ಧಗೊಳಿಸಿ ನಮ್ಮ ಜಿಲ್ಲೆಯಿಂದ ಹೆಚ್ಚು ಮಕ್ಕಳನ್ನು ರಾಜ್ಯಮಟ್ಟದಲ್ಲಿ ಪುರಸ್ಕಾರ ಪಡೆಯುವಂತಾಗಬೇಕು ಎಂದರು.

ಜಿಲ್ಲಾ ಸಂಘಟಕಿ ದಮಯಂತಿ ಯು.ಸಿ ಅವರು ರಾಜ್ಯ ಸಂಸ್ಥೆಯವರು ಪ್ರಕಟಿಸುತ್ತಿರುವ ವಾರ್ಷಿಕ ಕಾರ್ಯಕ್ರಮದ ಕೈಪಿಡಿ ಪುಸ್ತಕವನ್ನು ಬಿಡುಗಡೆ ಮಾಡಿದರು.

ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ರಂಜಿತ್ ಕೆ.ಯು ಸ್ಕೌಟ್ಸ್ ಮತ್ತು ಗೈಡ್ಸ್ ಬಗ್ಗೆ ಪುನಶ್ಚೇತನ ಮಾಹಿತಿ ನೀಡಿ ಎಲ್ಲಾ ಶಾಲೆಗಳಲ್ಲಿ ದಳವಿರುವುದನ್ನು ಖಾತರಿಪಡಿಸಬೇಕು, ಶಿಕ್ಷಣ ಇಲಾಖೆಯ ಒಂದು ಭಾಗವಾಗಿ ಸಂಸ್ಥೆ ಕೆಲಸ ಮಾಡುತ್ತಿರುವುದರಿಂದ ಶಾಲಾ ಮಕ್ಕಳಿಗೆ ಸಾಕಷ್ಟು ಪ್ರಯೋಜನಗಳಾಗುತ್ತಿವೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ ವರದಿ ವಾಚಿಸಿದರು. ಸಹ ಕಾರ್ಯದರ್ಶಿ ಲಲಿತ ವಾರ್ಷಿಕ ಆಯವ್ಯಯ ಮಂಡನೆ ಮಾಡಿದರು. ಸ್ಕೌಟ್ ಮಾಸ್ಟರ್ ಶ್ಯಾಮಿಲಿ ಅಂದಾಜು ಆಯವ್ಯಯ ಮಂಡಿಸಿದರು. ಸ್ಕೌಟ್ ಮಾಸ್ಟರ್ ಅನುಷಾ ವಾರ್ಷಿಕ ಕಾರ್ಯಕ್ರಮಗಳ ಪಟ್ಟಿಯನ್ನು ಓದಿದರು. ಸಭೆಯಲ್ಲಿ ಜಿಲ್ಲಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎA ವಸಂತಿ ಹಾಗೂ ವಿವಿಧ ಶಾಲೆಗಳ ೩೫ ಮಂದಿ ಶಿಕ್ಷಕರು ಪಾಲ್ಗೊಂಡಿದ್ದರು. ಸ್ಕೌಟ್ ಮಾಸ್ಟರ್ ಸುಮಿತ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.