ಶನಿವಾರಸಂತೆ, ಸೆ.೧: ಪ್ರತಿಯೊಬ್ಬರು ಜೀವನದಲ್ಲಿ ಇರುವುದರಲ್ಲಿಯೇ ತೃಪ್ತಿಪಡುವ ಮನೋಭಾವ ಬೆಳೆಸಿಕೊಂಡರೆ ನೆಮ್ಮದಿಯ ಜೀವನ ಸಾಗಿಸಬಹುದು ಎಂದು ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶ ಮಹಾಂತಶಿವಲಿAಗ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಶನಿವಾರಸಂತೆ ವಲಯದ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಭಾಗಿತ್ವದಲ್ಲಿ ಕೌಟುಂಬಿಕ ಸೌಹಾರ್ದತೆ ಮತ್ತು ಗ್ರಾಮ ಸುಭಿಕ್ಷೆಗಾಗಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆಯ ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರು ಕರುಣಿಸಿರುವ ಅನ್ನ, ನೀರು, ಮಾತು ಈ ಮೂರರಲ್ಲೇ ತೃಪ್ತಿಪಟ್ಟುಕೊಂಡರೆ ನೆಮ್ಮದಿಯ ಜೀವನ ಸಾಗಿಸಬಹುದು ಎಂದರು. ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಭಾಗಿತ್ವದಲ್ಲಿ ಕೌಟುಂಬಿಕ ಸೌಹಾರ್ದತೆ ಮತ್ತು ಗ್ರಾಮ ಸುಭಿಕ್ಷೆಗಾಗಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆಯ ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರು ಕರುಣಿಸಿರುವ ಅನ್ನ, ನೀರು, ಮಾತು ಈ ಮೂರರಲ್ಲೇ ತೃಪ್ತಿಪಟ್ಟುಕೊಂಡರೆ ನೆಮ್ಮದಿಯ ಜೀವನ ಸಾಗಿಸಬಹುದು ಎಂದರು. ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ.ಜಯಕುಮಾರ್, ನಿವೃತ್ತ ಮುಖ್ಯಶಿಕ್ಷಕ ಸಿ.ಎಲ್.ಸುಬ್ಬಯ್ಯ, ಕಾಳಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಬಿ.ನಾಗರಾಜ್ ಮಾತನಾಡಿದರು. ಸಾಮೂಹಿಕ ವರಮಹಾಲಕ್ಷಿö್ಮÃ ಪೂಜಾ ಸಮಿತಿ ಅಧ್ಯಕ್ಷೆ ಎಸ್.ಪಿ.ಭಾಗ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಧ.ಗ್ರಾ.ಯೋ. ಶನಿವಾರಸಂತೆ ವಲಯ ಮೇಲ್ವಿಚಾರಕಿ ಜಯಶ್ರೀ, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಕ್ಷಿತ್ ಗೌಡ, ಉಪಾಧ್ಯಕ್ಷ ಎಸ್.ಎಸ್.ದಿವಾಕರ್, ಗ್ರಾಮ ಪಂಚಾಯಿತಿ ಸದಸ್ಯ ಸಿ.ಜೆ.ಗಿರೀಶ್, ಒಕ್ಕೂಟದ ಕಾರ್ಯದರ್ಶಿ ಎಸ್.ಪಿ.ದಿವ್ಯಾ, ಪದಾಧಿಕಾರಿಗಳು, ಸೇವಾಪ್ರತಿನಿಧಿ ಗಳಾದ ಶೋಭಾವತಿ, ಮಂಜುಳಾ, ವನಿತಾ, ತಾರಾಮಣಿ, ಉಷಾರಾಣಿ, ರಮ್ಯಾ ಹಾಗೂ ಭುವನೇಶ್ವರಿ ಇತರ ಸದಸ್ಯರು ಉಪಸ್ಥಿತರಿದ್ದರು ಮೇಲ್ವಿಚಾರಕಿ ಜಯಶ್ರೀ ನಿರೂಪಿಸಿ, ದಿವ್ಯಾ ವಂದಿಸಿದರು.