ಪೊನ್ನಂಪೇಟೆ, ಸೆ. ೪: ಪೊನ್ನಂಪೇಟೆ ತಾಲೂಕಿನ ಬಾಳೆಲೆ ಸಮೀಪ ಕೈನಾಟಿ ಬಳಿ ತಾ. ೪ ರಂದು ಸಂಜೆ ಸುಮಾರು ೭ ಗಂಟೆ ಸಮಯದಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ವಿಜು ಎಂಬಾತ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಡೆದಿದೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಪೊನ್ನಂಪೇಟೆ ಠಾಣಾಧಿಕಾರಿ ನವೀನ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.