ಚೆಯ್ಯಂಡಾಣೆ, se. ೪: ಕಳೆದ ನಾಲ್ಕು ತಿಂಗಳಿನಿAದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯ ಕಿಯರಿಗೆ ಗೌರವಧನ ಸಿಗದೆ ಜೀವನ ಸಾಗಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಗೌರವಧನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಯರ ಸಂಘದ ಪದಾಧಿಕಾರಿಗಳು ಶಾಸಕರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕಳೆದ ಮೇ ತಿಂಗಳಿನಿAದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವಧನ ದೊರೆಯದೆ ಇದ್ದು ಇದರಿಂದ ಜೀವನ ನಿರ್ವಹಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಮಕ್ಕಳ ಪಾಲನೆ, ಪೋಷಣೆ, ಮನೆಯ ಬಾಡಿಗೆ ಖರ್ಚು, ಶಾಲಾ ಶುಲ್ಕ, ಅಗತ್ಯ ವಸ್ತುಗಳ ಖರೀದಿಗೆ ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಮಸ್ಯೆಗಳನ್ನು ಪರಿಹರಿಸಿ ಗೌರವಧನ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಮ್ಮ ಸಮಸ್ಯೆಗಳನ್ನು ಮುಂದಿಟ್ಟು ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘ (ಟಿಯುಸಿಸಿ) ವತಿಯಿಂದ ಇಲಾಖೆಯ ಉಪನಿರ್ದೇಶಕರು, ಜಿಲ್ಲಾಧಿಕಾರಿಗಳು, ಕಾರ್ಯ ನಿರ್ವಣಾಧಿಕಾರಿಗಳು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ ಗೌಡ ಹಾಗೂ ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳಿಗೆ

(ಮೊದಲ ಪುಟದಿಂದ) ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಸಿ.ಯು. ಪವಿತ್ರ, ಕಾರ್ಯದರ್ಶಿ ಎಂ. ಆಶಾಲತಾ, ಕೋಶಾಧಿಕಾರಿ ಕುಸುಮ, ಉಪಾಧ್ಯಕ್ಷೆ ವನಜಾ, ಕ್ಷೇಮನಿಧಿ ಅಧ್ಯಕ್ಷೆ ಸುಮತಿ, ಉಷಾ, ಅಕ್ಕಮ್ಮ ಹಾಗೂ ನಳಿನಿ ಹಾಜರಿದ್ದರು.