ಅಮ್ಮತ್ತಿ, ಸೆ. ೪: ಅಮ್ಮತ್ತಿ ಕಾರ್ಮಾಡುವಿನ ಶ್ರೀ ಚೌಡೇಶ್ವರಿ ಗಣಪತಿ ಸೇವಾ ಸಮಿತಿ ವತಿಯಿಂದ ೩೪ನೆ ವರ್ಷದ ಅದ್ಧೂರಿ ಗಣೇಶೋತ್ಸವ ವಿವಿಧ ಪೂಜಾ ಕಾರ್ಯಗಳೊಂದಿಗೆ ವಿಜೃಂಭಣೆಯಿAದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ವಿ.ಆರ್.ಸತೀಶ್ ತಿಳಿಸಿದ್ದಾರೆ.

ತಾ.೭ರಂದು ಗಣೇಶನ ಪ್ರತಿಷ್ಠಾಪನೆ ನಡೆಯಲಿದ್ದು, ನಂತರದ ದಿನಗಳಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತವೆ ಹಾಗೂ ಈ ಎಲ್ಲಾ ದಿನಗಳಲ್ಲಿ ರಾತ್ರಿ ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ತಾ.೨೧ ರಂದು ಬೆಳಗ್ಗೆಯಿಂದಲೇ ಅಲಂಕಾರ ಪೂಜೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಯನ್ನು ಮೈಸೂರಿನ ಪ್ರತಿಷ್ಠಿತ ವಾದ್ಯಗೋಷ್ಠಿಗಳು, ಮಂಗಳೂರಿನ ಕೀಲು ಕುದುರೆಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೆಳಿಗ್ಗೆ ಮದ್ರಿರ ಗಣೇಶ ಅವರ ಕೆರೆಯಲ್ಲಿ ಉತ್ಸವ ಮೂರ್ತಿಯ ವಿಸರ್ಜನೆ ಮಾಡಲಾಗುತ್ತದೆ ಎಂದು ಸಮಿತಿ ಅಧ್ಯಕ್ಷ ವಿ. ಆರ್. ಸತೀಶ್ ಮಾಹಿತಿ ನೀಡಿದ್ದಾರೆ.