ಸೋಮವಾರಪೇಟೆ, ಸೆ. ೪: ಕಳೆದ ಅನೇಕ ದಶಕಗಳಿಂದ ಸಿ ಮತ್ತು ಡಿ ಜಾಗದಲ್ಲಿ ಕೃಷಿ ಮೂಲಕ ಜೀವನ ಕಂಡುಕೊAಡಿರುವ ಕೃಷಿಕರಿಗೆ, ನಿದ್ದೆಗೆಡುವಂತೆ ಮಾಡಿರುವ ಇತ್ತೀಚೆಗಿನ ಸರ್ಕಾರಿ ಆದೇಶಗಳ ಬಗ್ಗೆ ರೈತರ ನಿಯೋಗ ಇಂದು ರಾಜ್ಯದ ಮುಖ್ಯಮಂತ್ರಿಗಳ ಸಹಿತ ಅರಣ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಿತು.

ಸಿ ಮತ್ತು ಡಿ ಜಾಗದಲ್ಲಿ ಕೃಷಿ ಮಾಡಿಕೊಂಡಿರುವ ಜಾಗಕ್ಕೆ ಹಕ್ಕುಪತ್ರ ನೀಡಬೇಕು. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸೋಮವಾರಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ರೈತರು, ಹೋರಾಟದ ಮುಂದುವರೆದ ಭಾಗವಾಗಿ ಪ್ರಮುಖರನ್ನು ಒಳಗೊಂಡAತೆ ನಿಯೋಗದ ಮೂಲಕ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ತಾಲೂಕು ರೈತ ಹೋರಾಟ ಸಮಿತಿ ವತಿಯಿಂದ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ, ವಾಸ್ತವಾಂಶಗಳ ಬಗ್ಗೆ ಗಮನ ಸೆಳೆಯಲಾಯಿತು.

ಮುಖ್ಯಮಂತ್ರಿಗಳ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಮಿತಿ ಪದಾಧಿಕಾರಿಗಳು, ಕೊಡಗಿನಲ್ಲಿ ರೈತರು ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಜಾಗವನ್ನು, ವಾಸ್ತವಾಂಶ ಅರಿಯದೇ ಅಂದಿನ ಅಧಿಕಾರಿಗಳು ಕೃಷಿಗೆ ಅಯೋಗ್ಯವೆಂದು ಭಾವಿಸಿ ಸಿ. ಮತ್ತು ಡಿ. ಜಾಗವೆಂದು ಗುರುತಿಸಿದ್ದಾರೆ. ಆದರೆ ಈ ಜಾಗದಲ್ಲಿ ನಾವುಗಳು ಕೃಷಿ ಮಾಡಿಕೊಂಡಿದ್ದು, ಜಾಗಕ್ಕೆ ಹಕ್ಕುಪತ್ರ ನೀಡಬೇಕೆಂದು ಸರ್ಕಾರಕ್ಕೆ ಎರಡು ದಶಕಗಳ ಹಿಂದೆಯೇ ಮನವಿ ಸಲ್ಲಿಸಿದ್ದೇವೆ. ಈ ಹಿನ್ನೆಲೆ ಸಿ ಮತ್ತು ಡಿ ಜಾಗ ಎಂದು ನಮೂದಾಗಿ ರುವುದನ್ನು ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇದರೊಂದಿಗೆ ಒತ್ತುವರಿಯನ್ನು ಸಕ್ರಮಗೊಳಿಸಿ ರೈತರಿಗೆ ಹಕ್ಕು ಪತ್ರ ನೀಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕೆಂದು ಗಮನ ಸೆಳೆಯಲಾಯಿತು. ಜಿಲ್ಲೆಯ ರೈತ ಮುಖಂಡರ ಅಹವಾಲಿನ ಬಗ್ಗೆ ಶಾಸಕ ಡಾ. ಮಂತರ್ ಗೌಡ ಹಾಗೂ ಎ.ಎಸ್. ಪೊನ್ನಣ್ಣ ಅವರುಗಳು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ ಅವರು, ಮನವಿಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅರಣ್ಯ ಸಚಿವರ ಭೇಟಿ: ಇದಕ್ಕೂ ಮುನ್ನ ಅರಣ್ಯ ಭವನದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿದ ನಿಯೋಗ, ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಪ್ರಸ್ತಾಪಿಸಿ, ವಾಸ್ತವಾಂಶಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿತು.

ಕೊಡಗು ಜಿಲ್ಲೆಯಲ್ಲಿ ಕೃಷಿ ಮಾಡಿಕೊಂಡಿರುವ ಪೈಸಾರಿ ಜಮೀನುಗಳನ್ನು ಕೃಷಿಗೆ ಯೋಗ್ಯವಲ್ಲದ ಜಮೀನುಗಳೆಂದು ಪರಿಭಾವಿಸಿ, ಸಿ ಮತ್ತು ಡಿ ಜಮೀನು ಗಳೆಂದು ಆರ್‌ಟಿಸಿಯಲ್ಲಿ ನಮೂದು ಮಾಡಲಾಗಿದೆ.

(ಮೊದಲ ಪುಟದಿಂದ) ಇದೀಗ ಈ ಜಾಗವನ್ನು ಅರಣ್ಯ ಇಲಾಖೆಯ ಹೆಸರಿಗೆ ವರ್ಗಾಯಿಸುವ ಪ್ರಯತ್ನ ನಡೆದಿದೆ. ನಾವುಗಳು ಕೃಷಿ ಮಾಡಿಕೊಂಡಿರುವ ಜಾಗವನ್ನು ಮೀಸಲು ಅರಣ್ಯ ಎಂದು ಉದ್ಘೋಷಣೆ ಮಾಡಲು ಅರಣ್ಯ ವ್ಯವಸ್ಥಾಪನಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಈ ಭಾಗದ ರೈತರ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಮನವರಿಕೆ ಮಾಡಿದರು.

ತಕ್ಷಣ ಸಿ ಮತ್ತು ಡಿ ಜಾಗವನ್ನು ಕಂದಾಯ ಇಲಾಖೆಗೆ ವರ್ಗಾಯಿಸಿ, ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಸಾಗುವಳಿಗೆ ಯೋಗ್ಯವಾದ ಎಲ್ಲಾ ಜಮೀನುಗಳಿಗೆ ಸಲ್ಲಿಕೆಯಾಗಿರುವ ನಮೂನೆ ೫೦, ೫೩ ಹಾಗೂ ೫೭ರ ಅರ್ಜಿಯನ್ನು ಮಾನ್ಯ ಮಾಡಿ ಮಂಜೂರಾತಿ ಮೂಲಕ ಹಕ್ಕುಪತ್ರ ನೀಡಬೇಕು. ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ, ರೈತರಿಗೆ ಜಾಗದ ಹಕ್ಕುಪತ್ರ ನೀಡಬೇಕು ಎಂದು ಸಮಿತಿ ಸದಸ್ಯರು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವರು, ಸದ್ಯದಲ್ಲೇ ಸಮಸ್ಯೆಗಳ ಬಗ್ಗೆ ಉನ್ನತ ಮಟ್ಟದ ಸಭೆ ಕರೆದು ಅಧಿಕಾರಿಯೊಂದಿಗೆ ಚರ್ಚಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸುದಾಗಿ ಭರವಸೆ ನೀಡಿದರು. ಮುಂದಿನ ದಿನದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಗಳ ಮೂಲಕ ಜಂಟಿ ಸರ್ವೇ ಮಾಡಿಸಲಾಗುವುದು ಎಂದರು.

ಕಳೆದ ೨೦೧೬-೧೭ರಲ್ಲಿ ಶಿವಮೊಗ್ಗದ ಪ್ರಕರಣದಲ್ಲಿ ಸಿ ಮತ್ತು ಡಿ ಜಾಗಕ್ಕೆ ನೀಡಲಾಗಿದ್ದ ಹಕ್ಕುಪತ್ರವನ್ನು ಹೈಕೋರ್ಟ್ ರದ್ದು ಮಾಡಿದೆ. ಇದೀಗ ಅರಣ್ಯ ಇಲಾಖೆಗೆ ಸಂಬAಧಿಸಿದAತೆ ಸರ್ವೋಚ್ಚ ನ್ಯಾಯಾಲಯದಲ್ಲಿಯೂ ಅರ್ಜಿ ಇದೆ. ಈ ಹಿನ್ನೆಲೆ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ. ೩ ಏಕರೆ ಒಳಗಿನ ಒತ್ತುವರಿ ತೆರವು ಮಾಡದಂತೆ ಈಗಾಗಲೇ ಸೂಚಿಸಲಾಗಿದೆ. ಸೂಕ್ಷö್ಮ ವಿಚಾರವಾಗಿರುವ ಹಿನ್ನೆಲೆ ಮತ್ತೊಮ್ಮೆ ಜಂಟಿ ಸರ್ವೆ ನಡೆಸಲಾಗುವುದು. ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ತೊಂದರೆಯಾಗದAತೆ ಕ್ರಮ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭ ರೈತ ಹೋರಾಟ ಸಮಿತಿಯ ಅಧ್ಯಕ್ಷ ಚಕ್ರವರ್ತಿ ಸುರೇಶ್, ಸಂಚಾಲಕರಾದ ಬಿ.ಜೆ. ದೀಪಕ್, ನಂದಕುಮಾರ್, ಬಗ್ಗನ ಅನಿಲ್, ಕೆ.ಎಂ. ಲೋಕೇಶ್, ಮಿಥುನ್ ಹರಗ, ನಿವೃತ್ತ ತಹಸೀಲ್ದಾರ್ ಜಯರಾಮ್, ರೈತ ಸಂಘದ ಉಪಾಧ್ಯಕ್ಷ ಹೂವಯ್ಯ, ನಿರ್ದೇಶಕ ರಮೇಶ್ ಹಿರಿಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಕೀಲರಾದ ಚಂದ್ರಮೌಳಿ, ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕಾಳಪ್ಪ, ರೈತ ಹೋರಾಟ ಸಮಿತಿಯ ಧರ್ಮಪ್ಪ ಹರಗ, ದಿವಾಕರ್ ಕೂತಿ, ಮೊಗಪ್ಪ, ಚೇತನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.