ಮುಳ್ಳೂರು: ಪ್ರತಿಯೊಬ್ಬರೂ ಇರುವುದರಲ್ಲಿ ತೃಪ್ತಿಯ ಮನೋಭಾವನೆಯನ್ನು ಬೆಳೆಸಿಕೊಂಡರೆ ನೆಮ್ಮದಿಯ ಜೀವನ ನಡೆಸಬಹುದು ಎಂದು ಅಂಕನಹಳ್ಳಿ ಶ್ರೀ ತಪೋವನ ಮನೆಹಳ್ಳಿ ಕ್ಷೇತ್ರದ ಮಠಾಧೀಶ ಶ್ರೀ ಮಹಾಂತಶಿವಲಿAಗ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶನಿವಾರಸಂತೆ ವಲಯದಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷಿö್ಮ ಪೂಜೆಯ ನಂತರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕ ದಿಂದ ಜೀವನ ಹಸನವಾಗುತ್ತದೆ. ಜೀವನದಲ್ಲಿ ಇರುವುದರಲ್ಲೆ ತೃಪ್ತಿ ಪಡೆದುಕೊಂಡರೆ ಸಂತೃಪ್ತಿಯ ಜೀವನ ಸಾಗಿಸಬಹುದು ಎಂದರು.
ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಶಿಕ್ಷಕ ಕೆ.ಪಿ. ಜಯಕುಮಾರ್ ಧಾರ್ಮಿಕ ಉಪನ್ಯಾಸ ನೀಡಿ, ಸಮಾಜದಲ್ಲಿ ಒಳ್ಳೆಯದು, ಕೆಟ್ಟದ್ದು ಇರುತ್ತದೆ. ಸ್ವಚ್ಛ ಮನಸು ಇದ್ದಲ್ಲಿ ಸಮಾಜವನ್ನು ಸ್ವಚ್ಛಗೊಳಿಸಲು ಸಾಧ್ಯವಾಗುತ್ತದೆ ಎಂದರು.
ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹೆಚ್. ರೋಹಿತ್, ಕಾಳಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಬಿ. ನಾಗರಾಜು, ಹಿರಿಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್. ಸುಬ್ಬಯ್ಯ ಮಾತನಾಡಿದರು. ಸಾಮೂಹಿಕ ವರಮಹಾಲಕ್ಷಿö್ಮ ಪೂಜಾ ಸಮಿತಿ ಅಧ್ಯಕ್ಷೆ ಎಸ್.ಪಿ. ಭಾಗ್ಯ ಅಧ್ಯಕ್ಷತೆ ವಹಿಸಿದ ಸಭಾ ಕಾರ್ಯಕ್ರಮದಲ್ಲಿ ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್, ಮದ್ಯವರ್ಜನ ಶಿಬಿರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ರಕ್ಷಿತ್‌ಗೌಡ ಉಪಾಧ್ಯಕ್ಷ ಎಸ್.ಎಸ್. ದಿವಾಕರ್, ಪ್ರಮುಖರಾದ ಸಿ.ಜೆ. ಗಿರೀಶ್, ವಲಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿಗಳು, ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪೊನ್ನAಪೇಟೆ ರಾಮಕೃಷ್ಣ ಶಾರದಾಶ್ರಮ
ಪೊನ್ನಂಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಪೊನ್ನಂಪೇಟೆ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಪೊನ್ನಂಪೇಟೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದಲ್ಲಿ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನದ ಅರ್ಚಕ ಶಂಕರ್ ವೈಲಾಯ ಅವರು ಪೂಜಾ ವಿಧಿವಿಧಾನಗಳೊಂದಿಗೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕೈಂಕರ್ಯವನ್ನು ನಡೆಸಿಕೊಟ್ಟರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಪರಾಹಿತಾ ನಂದಜೀ ಮಹಾರಾಜ್ ಮಾತನಾಡಿ, ಎಲ್ಲರೂ ಒಂದು ಕಡೆ ಸೇರಿ ಲಕ್ಷ್ಮಿಯನ್ನು ಭಜಿಸುವುದರಿಂದ ಲಕ್ಷ್ಮಿ ಒಲಿಯುವಳು. ಇದರಿಂದ ಇಷ್ಟಾರ್ಥ ಸಿದ್ದಿಸುವುದು. ಇಂತಹ ಧಾರ್ಮಿಕ ಆಚರಣೆಗಳು ಹೆಚ್ಚು ಸಮಾಜದಲ್ಲಿ ನಡೆಯಬೇಕು ಎಂದರು. ಯೋಜನಾಧಿಕಾರಿ ಬಿ. ದಿನೇಶ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಿತ್ಯ ನಿರಂತರವಾಗಿ ಕೈಗೊಳ್ಳುತ್ತಿರುವ ಸಮಾಜಮುಖಿ ಕಾರ್ಯಗಳ ಮಾಹಿತಿ ನೀಡಿದರು. ಆರ್ಥಿಕ ವ್ಯವಹಾರದ ಪಾರದರ್ಶಕತೆ, ಕೆರೆಗಳ ಅಭಿವೃದ್ಧಿ, ಮಾಸಾಶನ, ಮಳೆಯಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ, ಸಹಾಯ ಧನ, ಶಾಲೆಗಳಿಗೆ ಬೆಂಚ್-ಡೆಸ್ಕ್ ವಿತರಣೆ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯೋಜನೆಯ ಟ್ರಸ್ಟ್ ನಿಂದ ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು. ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಮನೆಯಪಂಡ ಶೀಲಾ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಬಾನಂಗಡ ಅರುಣ್ ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ ಮಾಡಿದರು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷ ಪೆಮ್ಮಂಡ ಸುಮನ್ ಉಮೇಶ್, ಗೀತಾ, ಜಯಂತಿ ಸುರೇಶ್, ಅನಿತಾ ಸಂತೋಷ್, ಮೇಲ್ವಿಚಾರಕ, ನಾಗರಾಜ್, ಸೇವಾಪ್ರತಿನಿಧಿಗಳು, ವಿಎಲ್‌ಈಗಳು, ವಿಪತ್ತು ನಿರ್ವಹಣೆ ತಂಡದ ಸದಸ್ಯರು ಸ್ವಸಹಾಯ ತಂಡಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.