ಮಡಿಕೇರಿ, ಸೆ. ೫: ೧೯೬೫ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕöÈತ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ೫೯ನೇ ಪುಣ್ಯಸ್ಮರಣೆ ತಾ.೭ ರಂದು (ನಾಳೆ) ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ನಗರಸಭೆ ಮಾಜಿ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್ ಕಂಡ್ರತAಡ ಸುಬ್ಬಯ್ಯ, ಸಂಚಾಲಕ ಮೇಜರ್ ಬಿದ್ದಂಡ ನಂಜಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಸ್ಕಾ÷್ವ.ಲೀ. ಅಜ್ಜಮಾಡ ಬಿ.ದೇವಯ್ಯ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ, ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.