ಮಡಿಕೇರಿ, ಸೆ. ೫ : ಪ್ರಸಕ್ತ (೨೦೨೪-೨೫) ಸಾಲಿಗೆ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ತರಗತಿ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ತಂತ್ರಾAಶದಲ್ಲಿ hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ. gov.iಟಿ/ssಠಿಠಿಡಿe ವೆಬ್‌ಸೈಟ್ ಚಾಲನೆಯಲ್ಲಿದ್ದು, ಅರ್ಜಿ ಆಹ್ವಾನಿಸ ಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.೦೮೨೭೨-೨೯೫೮೨೯ ನ್ನು ಹಾಗೂ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮಡಿಕೇರಿ ತಾಲೂಕು ರಾಜೇಶ್ ಬಿ.ಆರ್. ಮೊ.ಸಂ. ೮೦೭೩೧೯೨೯೧೪, ಕುಶಾಲನಗರ ಮತ್ತು ಸೋಮವಾರ ಪೇಟೆ ತಾಲೂಕು ಹರೀಶ್ ಟಿ.ಆರ್.-೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಪ್ರಥನ್ ಕುಮಾರ್ ಸಿ.ಬಿ. ೯೯೦೦೮೮೩೬೫೪ ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.