ಮಡಿಕೇರಿ, ಸೆ. ೫: ಒತ್ತುವರಿ ಕೃಷಿಭೂಮಿಯನ್ನು ಗುತ್ತಿಗೆ ನೀಡುವ ಸಂಬAಧ ಜಿಲ್ಲಾಡಳಿತ ಸೂಕ್ತ ಕ್ರಮವಹಿಸಬೇಕೆಂದು ಕೊಡಗು ಪ್ಲಾಂರ‍್ಸ್ ಅಸೋಸಿಯೇಷನ್ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಎ. ನಂದಾ ಬೆಳ್ಳಿಯ್ಯಪ್ಪ, ೧-೧-೨೦೦೫ರ ಮುನ್ನ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡಿಕೊಂಡ ರೈತರಿಗೆ, ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನಿಗದಿತ ಜಾಗವನ್ನು ನೀಡಲು ಸರಕಾರ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಈ ಕುರಿತು ಅಧಿಸೂಚನೆ ಹೊರಡಿಸಿ ಜಮೀನುಗಳನ್ನು ಭೋಗ್ಯಕ್ಕೆ ನೀಡಲು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.

ಕೊಡಗು ಜಿಲ್ಲೆಯ ಅಧಿಕಾರಿಗಳು ಈ ಕುರಿತ ಅಧಿಸೂಚನೆ ಅಥವಾ ಮಾರ್ಗ ಸೂಚಿಯನ್ನು ಬಿಡುಗಡೆ ಗೊಳಿಸುವ ನಿರೀಕ್ಷೆಯನ್ನು ಕೃಷಿಕರು ನಿರೀಕ್ಷಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಸೋಸಿಯೇಷನ್ ವತಿಯಿಂದ ಶಾಸಕ ಮಂತರ್ ಗೌಡ ಅವರೊಂದಿಗೆ ಚರ್ಚಿಸಲಾಗಿದ್ದು, ಸೂಕ್ತ ಕ್ರಮವಹಿಸಲು ಮನವಿ ಮಾಡಲಾಗಿದೆ. ಶಾಸಕರು ಪೂರಕ ಸ್ಪಂದನ ತೋರಿದ್ದಾರೆ ಎಂದು ತಿಳಿಸಿದ್ದಾರೆ.

ಭೂಮಿ ಗುತ್ತಿಗೆ ನೀಡುವುದ ರಿಂದ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಸಹಕಾರಿ ಯಾಗುತ್ತದೆ. ಈ ವ್ಯವಸ್ಥೆಯಿಂದ ಸರಕಾರಕ್ಕೆ ಆದಾಯವೂ ಬರುತ್ತದೆ. ಈ ಹಿನ್ನೆಲೆ ಜಿಲ್ಲಾಡಳಿತ ಕೂಡಲೇ ಒತ್ತುವರಿ ಮಾಡಿಕೊಂಡ ಭೂಮಿಯನ್ನು ನೈಜ ಬಳಕೆದಾರರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.