ಅಬಕಾರಿ ನೀತಿ ಹಗರಣ-ತೀರ್ಪು ಕಾಯ್ದಿರಿಸಿದ ಕೋರ್ಟ್
ನವದೆಹಲಿ, ಸೆ. ೫: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬAಧಿಸಿದAತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ವಾದವನ್ನು ಆಲಿಸಿದರು. ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ ನಂತರ ‘ತೀರ್ಪನ್ನು ಕಾಯ್ದಿರಿಸಲಾಗಿದೆ’ ಎಂದು ಪೀಠ ಹೇಳಿದೆ. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಜೂನ್ ೨೬ ರಂದು ಬಂಧಿಸಿತ್ತು. ಆಗಸ್ಟ್ ೫ ರಂದು ಸಿಬಿಐ ಕ್ರಮವನ್ನು ಎತ್ತಿ ಹಿಡಿದಿದ್ದ ದೆಹಲಿ ಹೈಕೋರ್ಟ್, ಮುಖ್ಯಮಂತ್ರಿಯ ಬಂಧನ ಕಾನೂನುಬದ್ಧವೆಂದು ಹೇಳಿತ್ತು.
ಶೇಖ್ ಹಸೀನಾ ಭಾರತದಲ್ಲಿ ಸುಮ್ಮನಿರಬೇಕು-ಯೂನಸ್
ಢಾಕಾ, ಸೆ. ೫: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿರುವ ಮೊಹಮ್ಮದ್ ಯೂನಸ್, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿರುವ ಶೇಖ್ ಹಸೀನಾ ಅಲ್ಲಿ ಕುಳಿತುಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುವುದು ಉಭಯ ದೇಶಗಳಿಗೂ ಅನಾನುಕೂಲತೆ ಉಂಟು ಮಾಡುತ್ತದೆ. ಇದು ಉಭಯ ದೇಶಗಳ ನಡುವಿನ ಮೈತ್ರಿಗೆ ವಿರುದ್ಧವಾದ ಲಕ್ಷಣವಾಗಿದೆ, ಆದ್ದರಿಂದ ಬಾಂಗ್ಲಾದೇಶ ಅವರ ಗಡಿಪಾರಿಗೆ ಮನವಿ ಸಲ್ಲಿಸುವವರೆಗೂ ಶೇಖ್ ಹಸೀನಾ ಭಾರತದಲ್ಲಿ ಸುಮ್ಮನಿರಬೇಕು ಎಂದು ಹೇಳಿದ್ದಾರೆ. ಬಾಂಗ್ಲಾದೇಶ (ಸರ್ಕಾರ) ಆಕೆಯನ್ನು ಹಿಂತಿರುಗಿಸುವುದಕ್ಕೆ ಮನವಿ ಸಲ್ಲಿಸುವವರೆಗೂ ಭಾರತವು ಆಕೆಯನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಬಯಸಿದರೆ, ಆಕೆ ಮೌನವಾಗಿರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಸಂದರ್ಶನವೊAದರಲ್ಲಿ ಮಾತನಾಡಿರುವ ಮೊಹಮ್ಮದ್ ಯೂನಸ್, ಬಾಂಗ್ಲಾ, ಭಾರತದೊಂದಿಗಿನ ಭಾರತದೊಂದಿಗೆ ಬಲವಾದ ಬಾಂಧವ್ಯ ಮೌಲ್ಯಯುತವಾದದ್ದು ಎಂದು ಗೌರವಿಸುತ್ತದೆ. ಭಾರತ ಅವಾಮಿ ಲೀಗ್ ಹೊರತುಪಡಿಸಿ ಉಳಿದೆಲ್ಲ ರಾಜಕೀಯ ಪಕ್ಷಗಳನ್ನು ಇಸ್ಲಾಮಿಸ್ಟ್ ಎಂದು ಬಿಂಬಿಸುವ ಮತ್ತು ಶೇಖ್ ಹಸೀನಾ ಇಲ್ಲದೆ ದೇಶವು ಅಫ್ಘಾನಿಸ್ತಾನವಾಗಿ ಬದಲಾಗುತ್ತದೆ ಎಂಬ ನಿರೂಪಣೆಯನ್ನು ಮೀರಿ ನಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ಮಣಿಪುರ ಹಿಂಸಾಚಾರಕ್ಕೆ ಮುಖ್ಯಮಂತ್ರಿಯಿAದ ಸಂಚು ಆರೋಪ
ನವದೆಹಲಿ, ಸೆ. ೫: ಮಣಿಪುರದಲ್ಲಿ ಕುಕಿ ಸಮುದಾಯದ ವಿರುದ್ದ ದೊಡ್ಡ ಪ್ರಮಾಣದ ಜನಾಂಗೀಯ ಹಿಂಸಾಚಾರ ನಡೆಸಲು ಸಂಚು ರೂಪಿಸಿದ ಅರೋಪದ ಮೇಲೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ನಡೆಸುವಂತೆ ಒತ್ತಾಯಿಸಿ, ಸುಪ್ರೀಂಕೋರ್ಟ್ ನೇಮಕ ಮಾಡಿರುವ ಅಧಿಕಾರಿಗೆ ಕುಕಿ ಸಮುದಾಯದ ಸಂಘಟನೆಯೊAದು ಪತ್ರ ಬರೆದಿದೆ. ಜನಾಂಗೀಯ ಹಿಂಸಾಚಾರ ಕುರಿತಾದ ತನಿಖೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಅಧಿಕಾರಿ ದತ್ತಾತ್ರೇಯ ಪಡಸಾಲ್ಟಿಕರ್ ಅವರಿಗೆ ಮಾನವ ಹಕ್ಕುಗಳಿಗೆ ಸಂಬAಧಿಸಿದ ಕುಕಿ ಸಂಘಟನೆಯು ಪತ್ರ ಬರೆದಿದೆ. ಅಧಿಕಾರಿ ದತ್ತಾತ್ರೇಯ ಪಡಸಾಲ್ಟಿಕರ್ ಅವರಿಗೆ ಗೃಹ ಕಾರ್ಯದರ್ಶಿ ಮೂಲಕ ಪತ್ರ ಬರೆದಿರುವ ಸಂಘಟನೆಯು, ಸಿಎಂ ಮಣಿಪುರ ಹಿಂಸಾಚಾರಕ್ಕೆ ಸಂಚು ರೂಪಿಸಿರುವ ಕುರಿತಾದ ಕೆಲವು ಲೇಖನಗಳು ಮತ್ತು ಸೋರಿಕೆಯಾದ ಕೆಲವು ಅಡಿಯೊಕ್ಲಿಪ್‌ಗಳನ್ನು ಸಂಘಟನೆ ಸಲ್ಲಿಸಿದ್ದು, ಕ್ರಮಕ್ಕೆ ಒತ್ತಾಯಿಸಿದೆ.
ಸಮಿತಿ ರಚನೆಗೆ ಕನ್ನಡ ಸಿನಿಮಾ ಕಲಾವಿದರ ಒತ್ತಾಯ
ಬೆಂಗಳೂರು, ಸೆ. ೫: ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿ ‘ಫೈರ್' ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು. ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸಬೇಕು ಎಂದೂ ನಿಯೋಗ ಒತ್ತಾಯಿಸಿದೆ. ಸಿನಿಮಾ ಈಗಾಗಲೇ ಫೈರ್ ಸಂಸ್ಥೆ ೧೩೦ಕ್ಕೂ ಮಂದಿ ಸಹಿ ಮಾಡಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿದೆ.
ಅಂಗಲಾಚುತ್ತಿರುವ ರೇಣುಕಾಸ್ವಾಮಿ-ಫೋಟೋಗಳು ಪೊಲೀಸರಿಗೆ ಲಭ್ಯ
ಬೆಂಗಳೂರು, ಸೆ. ೫: ನಟ ದರ್ಶನ್ ಮತ್ತು ಗ್ಯಾಂಗ್‌ನಿAದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್‌ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ ಅನಾಥವಾಗಿ ಬಿದ್ದಿರುವ ಫೋಟೋಗಳು ಪೊಲೀಸರಿಗೆ ಸಿಕ್ಕಿದೆ. ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ. ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಪ್ರಕರಣದಲ್ಲಿ ೧೦ನೇ ಆರೋಪಿಯಾಗಿರುವ ವಿನಯ್ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದನು. ಫೋಟೋ ಕ್ಲಿಕ್ಕಿಸಿ ಬಳಿಕ ಸ್ಮಾರ್ಟ್ಫೋನ್‌ನಿಂದ ಡಿಲೀಟ್ ಮಾಡಿದ್ದನು. ಆದರೆ ವಿಧಿ ವಿಜ್ಞಾನ ತಂಡ ಡಿಲೀಟ್ ಆದ ಫೋಟೋಗಳನ್ನುರಿಟ್ರೀವ್ ಮಾಡಿದೆ. ವಿನಯ್ ಫೋನ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ ಎನ್ನಲಾಗಿದೆ.
ಪ್ರತ್ಯೇಕ ಎನ್‌ಕೌಂಟರ್ - ೧೫ ನಕ್ಸಲರು ಹತ
ಹೈದರಾಬಾದ್, ಸೆ. ೫: ತೆಲಂಗಾಣ ಹಾಗೂ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಒಟ್ಟು ೧೫ ನಕ್ಸಲರು ಹತರಾಗಿದ್ದಾರೆ. ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ೬ ಮಂದಿ ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದು ೬ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ತಿಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ೯ ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬುಧವಾರ ಬೆಳಿಗ್ಗೆ ೧೦.೩೦ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯದ ಐಜಿ ಸುಂದರರಾಜ್ ತಿಳಿಸಿದ್ದಾರೆ. ದಾಂತೇವಾಡ ಮತ್ತು ಬಿಜಾಪುರ್ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಶೋಧ ಕಾರ್ಯಾಚರಣೆಯಲ್ಲಿ, ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ ಕಂಪೆನಿ ನಂ. ೨ ರಿಂದ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯಿತು. ಅವರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು ಮತ್ತು ಸೆಲ್ಫ್ ಲೋಡಿಂಗ್ ರೈಫಲ್ ೩೦೩, ೧೨ ಬೋರ್ ಗನ್ ಸೇರಿದಂತೆ ಹಲವು ಶಸ್ತಾçಸ್ತಾçಗಳನ್ನು ವಶಪಡಿಸಿಕೊಳ್ಳಲಾಗಿದೆ.