ಚೆಯ್ಯಂಡಾಣೆ, ಸೆ. ೫: ನಾಪೋಕ್ಲು ಸಮೀಪದ ಕೊಳಕೇರಿ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ೨೦೨೫ರ ಏಪ್ರಿಲ್ ೧೧ ರಿಂದ ೧೫ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದ್ದಾರೆ.