ಗೋಣಿಕೊಪ್ಪಲು, ಸೆ. ೫ : ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು, ಮಕ್ಕಳನ್ನು ತಪ್ಪದೇ ಶಾಲೆಗಳಿಗೆ ಕಳುಹಿಸುವ ಮೂಲಕ ಅವರನ್ನು ವಿದ್ಯಾವಂತರನ್ನಾಗಿ ಮಾಡುವ ಅತ್ಯಂತ ದೊಡ್ಡ ಜವಾಬ್ದಾರಿ

ತಮ್ಮ ಮೇಲಿದೆ ಎಂದು ಗೋಣಿಕೊಪ್ಪಲುವಿನ ಸಮಾಜ ಸೇವಕಿ ಕೊಟ್ಟಂಗಡ ವಿಜು ದೇವಯ್ಯ ಪೌರ ಕಾರ್ಮಿಕರಿಗೆ ಕಿವಿಮಾತು ಹೇಳಿದರು.

ಕೊಡಗಿನ ಸಾಂಪ್ರದಾಯಿಕ ಹಬ್ಬವಾದ ಕೈಲ್ ಪೊಳ್ದ್ ಪ್ರಯುಕ್ತ ನಗರದ ಗ್ರಾಮ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಹಬ್ಬದ ಪೌರ ಕಾರ್ಮಿಕರಿಗೆ ಕಿವಿಮಾತು ಹೇಳಿದರು.

ಕೊಡಗಿನ ಸಾಂಪ್ರದಾಯಿಕ ಹಬ್ಬವಾದ ಕೈಲ್ ಪೊಳ್ದ್ ಪ್ರಯುಕ್ತ ನಗರದ ಗ್ರಾಮ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಹಬ್ಬದ ಕೈಗೊಳ್ಳಬೇಕು, ಮಳೆ, ಬಿಸಿಲೆನ್ನದೇ ದುಡಿಯುವ ನೀವುಗಳು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ದುಶ್ಚಟಗಳಿಗೆ ದಾಸರಾಗಬಾರದು. ಕೈಗಳಿಗೆ ಗ್ಲೌಸ್, ಕಾಲಿಗೆ ಶೂಗಳನ್ನು ಧರಿಸಿಯೇ ಕೆಲಸಕ್ಕೆ ಮುಂದಾಗಬೇಕು. ತಾವು ಮಾಡುವ ಕೆಲಸಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.

ನಗರದ ಸ್ವಾತಂತ್ರ‍್ಯ ಹೋರಾಟಗಾರ ಭವನದ ಆವರಣದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಾದ ಮಂಜು, ರಾಮ ಸೇರಿದಂತೆ ಇನ್ನಿತರ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದರು.