ಕುಶಾಲನಗರ, ಆ.೫: ಕುಶಾಲನಗರ ಪಟ್ಟಣ ವ್ಯಾಪ್ತಿಯ ಮುಳ್ಳುಸೋಗೆ ಗ್ರಾಮ ಜನತಾ ಕಾಲೋನಿಯಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶರೀನಾ (೫೦) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತಳ ಸಹೋದರ ಶಬೀರ್ ಖಾನ್ ಕುಶಾಲನಗರ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.