ವೀರಾಜಪೇಟೆ, ಸೆ. ೫: ಶಿಕ್ಷಕರು ಕಲಿತರೆ ಮಾತ್ರ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಲು ಸಾಧ್ಯ. ಶಿಕ್ಷಕರು ತಾವು ಕಲಿತದ್ದನ್ನು ತಮ್ಮ ವಿದ್ಯಾರ್ಥಿಗಳಿಗೆ ಬೋಧಿಸಿ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಿ ಹೇಗೆ ಬದುಕನ್ನು ನಿಭಾಯಿಸಬೇಕು ಎಂಬುದನ್ನು ಮಕ್ಕಳಿಗೆ ಮನವರಿಕೆ ಆಗುವಂತೆ ತಿಳಿ ಹೇಳುವುದರ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಬೇಕು ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದರು.

ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವೀರಾಜಪೇಟೆ ಇವರ ಸಹಯೋಗದಲ್ಲಿ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು ವಾರ್ಷಿಕ ಪರೀಕ್ಷೆಯಲ್ಲಿ ಎಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎನ್ನುವುದಕ್ಕಿಂತ ಮುಂದಿನ ಜೀವನದಲ್ಲಿ ಅವರಿಗೆ ಎದುÀರಾಗುವ ಸಮಸ್ಯೆಗಳನ್ನು ಎದುರಿಸಲು ಶಕ್ತರಾಗಿದ್ದಾರೆಯೇ ಎನ್ನುವುದು ಮುಖ್ಯವಾಗುತ್ತದೆ. ಆದ್ದರಿಂದ ಸೋಲನ್ನು ಅರಗಿಸಿಕೊಳ್ಳುವ ಶಕ್ತಿ ಬರುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ರೂಪಿಸಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವುದನ್ನು ಶಿಕ್ಷಕರು ಕಲಿಸಿದಾಗ ಮಾತ್ರ ಶಿಕ್ಷಣಕ್ಕೆ ಯಶಸ್ಸು ಸಿಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ರಾಷ್ಟç ನಿರ್ಮಾಣದಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಬೇಕಿದೆ ಎಂದರು.

ಮೈಸೂರು ವರಕೋಡು ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ದೇವರಾಜ್ ಚಿಕ್ಕಹಳ್ಳಿ ಪ್ರಧಾನ ಭಾಷಣ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಪ್ರಕಾಶ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ತಹಶೀಲ್ದಾರ್ ರಾಮಚಂದ್ರ, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್, ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಜೇಮ್ಸ್ ಡೋಮಿನಿಕ್, ಧರ್ಮಗುರು ಮದಲೈಮುತ್ತು, ಕೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣದÀ ಸಹಾಯಕ ನಿರ್ದೇಶಕ ಕೆ.ಆರ್. ರಾಜೇಶ್, ಮತ್ತಿತರರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. ೧೦೦ ಅಂಕಪಡೆದ ಶಾಲಾ ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಿಕ್ಷಕಿ ಚಂದನ ಹಾಗೂ ಭಾಗ್ಯವತಿ ಕಾರ್ಯಕ್ರಮ ನಿರೂಪಿಸಿದರು. ಬಿ.ಆರ್.ಪಿ ವಾಮನ ವಂದಿಸಿದರು.