ಸುಂಟಿಕೊಪ್ಪ, ಸೆ. ೬: ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ ೬ ನೇ ವರ್ಷದ ಗೌರಿ ಗಣೇಶೋತ್ಸವವು ಶನಿವಾರದಿಂದ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ನಡೆಯಲಿದೆ.
ತಾ. ೭ರಂದು ಗೌರಿ- ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ.
ಸಂಜೆ ೬ ಗಂಟೆಯಿAದ ಕೊಡಗರಹಳ್ಳಿ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ. ನಂತರ ಅನ್ನಸಂತರ್ಪಣೆ ನಡೆಯಲಿದೆ.
ತಾ. ೮ರಂದು ಸಂಜೆ ೬ ಗಂಟೆಯಿAದ ಮಕ್ಕಳು ಮತ್ತು ಗ್ರಾಮಸ್ಥರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ 'ಮಾಯೊದ ನಿರೆಲ್' ಎಂಬ ತುಳು ಕಾಲ್ಪನಿಕ ನಾಟಕ ನಡೆಯಲಿದ್ದು, ನಂತರ ಅನ್ನಸಂತರ್ಪಣೆ ನಡೆಯಲಿದೆ.
ತಾ. ೯ರಂದು ಮಧ್ಯಾಹ್ನ ಗೌರಿ ಗಣೇಶ ಮೂರ್ತಿಗೆ ವಿಶೇಷ ಪೂಜೆ, ಮಹಾಪೂಜೆ, ಮಹಾಮಂಗಳಾರತಿಯ ನಂತರ ಅನ್ನಸಂತರ್ಪಣೆ ನಡೆಯಲಿದೆ. ಅಂದು ಮಧ್ಯಾಹ್ನ ೩ ಗಂಟೆಗೆ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಭವ್ಯ ಶೋಭಾಯಾತ್ರೆ ನಡೆದು ರಾತ್ರಿ ೯ ಗಂಟೆಗೆ ವಿಧ್ಯುಕ್ತವಾಗಿ ವಿಸರ್ಜಿಸ ಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.