ಸೋಮವಾರಪೇಟೆ, ಸೆ. ೧೦: ಇಲ್ಲಿನ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಸ್.ವೈ. ಹಿಮಾನಿ ಚೆಸ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಚೆಸ್‌ನ ಫೈನಲ್ ಪಂದ್ಯದಲ್ಲಿ ಮಡಿಕೇರಿ ತಂಡವನ್ನು ಮಣಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.