ಕರಿಕೆ, ಸೆ. ೧೦: ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೊಡಗಿನ ಅಧಿಕಾರಿಗಳು ಸೇರಿ ೪೯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರದಾನ ಮಾಡಿದರು. ಕೊಡಗಿನ ವಲಯ ಅರಣ್ಯ ಅಧಿಕಾರಿಯಾಗಿದ್ದ ವೀರೇಂದ್ರ ಮರಿ ಬಸವಣ್ಣನವರ, ಉಪ ವಲಯ ಅರಣ್ಯ ಅಧಿಕಾರಿ ಶಶಿ ಪಿ.ಟಿ., ಉಮೇಶ್ ಹೆಚ್.ಬಿ., ಈ ಮೂರು ಮಂದಿ ಮುಖ್ಯಮಂತ್ರಿಗಳಿAದ ಪದಕ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ, ಹಿರಿಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.