ಮಡಿಕೇರಿ, ಸೆ. ೧೦: ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗಳಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಬೇತಿ ಶಿಬಿರದಲ್ಲಿ ಮಡಿಕೇರಿಯ ಗೃಹರಕ್ಷಕ ದಳದ ಸಿಬ್ಬಂದಿ ಲವಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ.

ಪ್ರಸ್ತುತ ಇವರು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲವಿ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ನಗರ ಸಂಚಾರಿ ಠಾಣೆ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಚಾರಿ ಠಾಣಾಧಿಕಾರಿ ಶ್ರೀಧರ್, ತಮ್ಮಯ್ಯ, ಎಎಸ್‌ಐ ನಂದ ಐ.ಪಿ. ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಹಾಜರಿದ್ದರು.