ಮಡಿಕೇರಿ, ಅ.೧ : ಭೂ ಮಾಫಿಯಾದಲ್ಲಿ ತೊಡಗಿರುವ ಬಂಡವಾಳಶಾಹಿಗಳು ಬೃಹತ್ ಭೂಪರಿವರ್ತನೆ ಮೂಲಕ ಕೊಡವರ ಮಾತೃಭೂಮಿ ಕೊಡವಲ್ಯಾಂಡ್ ಮೇಲೆ ನಡೆಸುತ್ತಿರುವ ನಯವಂಚನೆಯ ಸಂಚನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಯಲು ಮಾಡಲಿದೆ ಎಂದು ಸಿ.ಎನ್.ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದರು.

ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿ.ಎನ್.ಸಿ ವತಿಯಿಂದ ಶ್ರೀಮಂಗಲದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ, ದಸರಾ, ಹಾಕಿ ಉತ್ಸವ, ದೇವಾಲಯಗಳ ಹಬ್ಬಗಳಿಗೆ ದೇಣಿಗೆ ನೀಡುತ್ತಿರುವ ಭೂಮಾಫಿಯಾಗಳು ದಾನ, ಧರ್ಮ, ಪರಿಸರ ಸಂರಕ್ಷಣೆಯ ನಾಟಕವಾಡುತ್ತಿದ್ದಾರೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಸಮಾಜಸೇವೆಯ ಮುಖವಾಡ ತೊಟ್ಟುಕೊಂಡಿದ್ದಾರೆ. ಈ ನಯವಂಚಕತನದ ಷಡ್ಯಂತರವನ್ನು ಸಿ.ಎನ್.ಸಿ ಸಂಘಟನೆ ಹೋರಾಟದ ಮೂಲಕ ಬಯಲು ಮಾಡಲಿದೆ ಎಂದರು.

ಹಸಿರ ಪರಿಸರ, ಜಲಪ್ರದೇಶಗಳ ಸಂರಕ್ಷಣೆಗಾಗಿ ಸರ್ಕಾರ ಸೂಕ್ಷö್ಮ ಪರಿಸರ ವಲಯ ಮತ್ತು ವಿಶ್ವ ಪಾರಂಪರಿಕ ತಾಣ ಕಾನೂನನ್ನು ಜಾರಿಗೆ ತಂದಿದೆ. ಆದರೆ ಕೊಡಗಿನಲ್ಲಿ ಈ ಕಾನೂನು ಬಂಡವಾಳಶಾಹಿಗಳಿಗೆ ಅನ್ವಯವಾಗುತ್ತಿಲ್ಲ. ಬದಲಿಗೆ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮೇಲೆ ಹೇರಲಾಗುತ್ತಿದೆ ಎಂದು ಎನ್.ಯು. ನಾಚಪ್ಪ ಆರೋಪಿಸಿದರು.

ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂ ಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್‌ಶಿಪ್, ಬೃಹತ್ ಭೂ ಪರಿವರ್ತನೆ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ಅನ್ನು ನಾಶ ಮಾಡುತ್ತಿದ್ದಾರೆ ಮತ್ತು ಕೊಡವರನ್ನು ಬಲಿಪಶು ಮಾಡುತ್ತಿದ್ದಾರೆ. ಈ ಎಲ್ಲಾ ಮಾಫಿಯಾಗಳಿಗೆ ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷವಿದೆ. ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ಕೊಡವ ವಿರೋಧಿಗಳ ಬೆಂಬಲವಿದೆ ಎಂದು ಆರೋಪಿಸಿದರು.

ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು ``ಕೊಡವ ಲ್ಯಾಂಡ್'' ಸ್ವಯಂ ನಿರ್ಣಯದ ಭೂ ರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಜನಜಾಗೃತಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದ ಸಿ.ಎನ್.ಸಿ ಪ್ರಮುಖರು ಹಾಗೂ ಗ್ರಾಮಸ್ಥರು ಬೃಹತ್ ಭೂಪರಿವರ್ತನೆ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿವಿಧೆಡೆ ಜನಜಾಗೃತಿ

ಬೃಹತ್ ಭೂಪರಿವರ್ತನೆ ವಿರುದ್ಧ ತಾ.೫ ರಂದು ತಿತಿಮತಿ, ತಾ.೯ರಂದು ಅಮ್ಮತ್ತಿ, ನಂತರದ ದಿನಗಳಲ್ಲಿ ಭಾಗಮಂಡಲ ಹಾಗೂ ಮಡಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಸಲಾಗುವುದು ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು.

ಅಜ್ಜಮಾಡ ಸಾವಿತ್ರಿ, ಅಜ್ಜಮಾಡ ಸುಮಾ, ಚೊಟ್ಟೆಯಂಡಮಾಡ ಪಾರ್ವತಿ, ಚಂಗುಲAಡ ರಾಜಪ್ಪ, ಚಂಗುಲAಡ ರ‍್ಯಾಲಿ, ಅಜ್ಜಮಾಡ ಮೋಹನ್, ಅಜ್ಜಮಾಡ ಇಮ್ಮಿ, ಅಜ್ಜಮಾಡ ಚೆಂಗಪ್ಪ, ಮಾಣೀರ ಮುತ್ತಪ್ಪ, ಬಾದುಮಂಡ ರಾಜಪ್ಪ, ಚೊಟ್ಟೆಯಂಡಮಾಡ ತಿಮ್ಮಯ್ಯ, ಕಾಳಿಮಾಡ ಹರೀಶ್, ತಿತೀರ ಸೂರಜ್, ತೀತಿರ ಶರಣು ಸುಬ್ರಮಣಿ, ಬಾದುಮಂಡ ಉಮೇಶ್, ಮುಕ್ಕಾಟಿರ ಕಾಶಿ, ಬಾದುಮಂಡ ಮುದ್ದಯ್ಯ, ಐಪುಮಾಡ ಸುಬ್ಬಯ್ಯ, ಕಾಳಿಮಾಡ ತಮ್ಮ, ಅಲ್ಲೇಟಿರ ವಿಜಯ್ ಮಾಚಯ್ಯ, ಕೋಟ್ರಂಗಡ ಅರುಣ, ಬಾದುಮಂಡ ವಿಜಯ, ಬಾಚಂಗಡ ದಾದಾ, ಕಳ್ಳಂಗಡ ಮದನ್, ಚೇಂದ್ರಿಮಾಡ ವಿವೇಕ್ ಕಾರ್ಯಪ್ಪ, ಅಯ್ಯಮಾಡ ಕಾರ್ಯಪ್ಪ, ನೂರೇರ ಸೋಮಯ್ಯ, ಚೇಂದ್ರಿಮಾಡ ವಸಂತ್, ತಡಿಯಂಗಡ ಅಚ್ಚಯ್ಯ, ಕಳ್ಳಿಚಂಡ ಮಧು, ಮತ್ರಂಡ ಅಯ್ಯಪ್ಪ, ಬಾದುಮಂಡ ಚಿಮ್ಮ, ಅಜ್ಜಮಾಡ ಸಿದ್ದು, ಪೆಮ್ಮಣಮಾಡ ಡಾಲಿ, ಅಜ್ಜಮಾಡ ನವೀನ್, ಕಾಳಿಮಾಡ ದಿಲೀಪ್, ಆಲೆಮಾಡ ಅಯ್ಯಪ್ಪ, ಬಾಚಂಗಡ ನಂಜಪ್ಪ, ಚೇಂದAಡ ವಿಶ್ವನಾಥ್, ತೀತಿರ ತಮ್ಮಯ್ಯ, ಕೋಟ್ರಂಗಡ ಮುಕುಂದ, ಬಾದುಮಂಡ ಲವ, ಕಳ್ಳಂಗಡ ರಜಿತ್, ಮದ್ರಿರ ವಿಷ್ಣು, ಕಳ್ಳಂಗಡ ವಿಠಲ್ ನಾಣಯ್ಯ, ಕುಂಞAಗಡ ಬೋಸ್, ಕಳ್ಳಂಗಡ ರಾಯ್, ಮಾದೀರ ಸುಧಿ, ಮಚ್ಚಮಾಡ ರಂಜಿ, ಕಳ್ಳಂಗಡ ಕಿಶನ್, ಬಾಚರಣಿಯಂಡ ಚಿಪ್ಪಣ್ಣ, ಕಾಂಡೇರ ಸುರೇಶ್, ಅಜ್ಜಿಕುಟ್ಟಿರ ಲೋಕೇಶ್, ಬೊಟ್ಟಂಗಡ ಗಿರೀಶ್, ಕಿರಿಯಮಾಡ ಶೆರಿನ್ ಜಾಗೃತಿಯಲ್ಲಿ ಪಾಲ್ಗೊಂಡಿದ್ದರು.