*ಗೋಣಿಕೊಪ್ಪ, ಅ. ೧: ವೀರಾಜ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ ತಂಡ ಥ್ರೋಬಾಲ್, ಟೇಬಲ್ ಟೆನ್ನಿಸ್ ಮತ್ತು ಶಟಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ವಿಭಾಗವು ಥ್ರೋಬಾಲ್, ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್ನಲ್ಲಿ ಪ್ರಥಮ ಸ್ಥಾನ, ಬಾಲ್ ಬ್ಯಾಡ್ಮಿಂಟನ್ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಒಟ್ಟು ೬೫ ಅಂಕಗಳನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿ ಕೊಂಡಿದೆ. ಚೆಸ್ ವಿಭಾಗದಲ್ಲಿ ಯದುನಂದನ್ ಮತ್ತು ಶ್ರೇಯಸ್ ರೈ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದಾರೆ.