ಸಿದ್ದಾಪುರ, ಅ. ೧: ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಮೈಲಾಪುರ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಪ್ಪಾಜಿ ದೇವಾಲಯ ದಲ್ಲಿ ಪ್ರತಿಷ್ಠಾಪನೆ ಮಾಡಿದ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ವಿಸರ್ಜನೆÀ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಾದ್ಯಗೋಷ್ಠಿ ಯೊಂದಿಗೆ ಹುಣಸೂರಿನ ಕೀಲು ಕುದುರೆ ನವಿಲು ಇನ್ನಿತರ ಗೊಂಬೆಗಳ ನೃತ್ಯ ಪ್ರದರ್ಶನವು ಮೆರವಣಿಗೆಗೆ ಮೆರಗು ತಂದಿತು. ಉತ್ಸವದ ಅಂಗವಾಗಿ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಸರ್ಜನೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರು ಭೇಟಿ ನೀಡಿ ದೇವಾಲಯದ ಆಡಳಿತ ಮಂಡಳಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೆರವಣಿಗೆ ಸಂದರ್ಭದಲ್ಲಿ ಮಾಲ್ದಾರೆ ರಸ್ತೆಯಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಯಲ್ಲಿ ತೆರಳಿದ ಭಕ್ತಾದಿಗಳಿಗೆ ತಂಪು ಪಾನೀಯ ಹಾಗೂ ಸಿಹಿ ತಿಂಡಿಗಳನ್ನು ವಿತರಿಸುವ ಮೂಲಕ ಸೌಹಾರ್ದತೆಯನ್ನು ಮೆರೆದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ದಪ್ಪಾಜಿ ದೇವಾಲಯದ ಪ್ರಮುಖರಾದ ಬಾಲು ಸ್ವಾಮಿ. ಗಣೇಶ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಚಿನ್ನಮ್ಮ, ಇನ್ನಿತರರು ಹಾಜರಿದ್ದರು.
ಈ ಸಂದರ್ಭ ಶಾಸಕ ಎ.ಎಸ್. ಪೊನ್ನಣ್ಣನವರನ್ನು ದೇವಾಲಯ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.