ಮಡಿಕೇರಿ, ಅ. ೧: ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ. ರಮೇಶ್ ಅವರಿಗೆ ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿ ಯಿಂದ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೈಸೂರಿನ ದಿ ಇನ್ಸಿ÷್ಟಟ್ಯೂಷನ್ ಆಫ್ ಇಂಜಿನಿರ‍್ಸ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ಅನ್ವೇಷಣಾ ಸೇವಾ ಟ್ರಸ್ಟ್ನ ಅಧ್ಯಕ್ಷ ಡಾ. ಎಂ.ಜಿ.ಆರ್. ಅರಸ್, ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ನ ಉಪಾಧ್ಯಕ್ಷ ಹೆಚ್.ಎ. ವೆಂಕಟೇಶ್ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿದಾನಂದಗೌಡ ಅವರು ಟಿ.ಪಿ. ರಮೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಇದೇ ಸಂದರ್ಭ ಮೈಸೂರಿನ ಕಾವೇರಿ ಬಳಗದ ವತಿಯಿಂದ ಎನ್.ಕೆ. ಕಾವೇರಮ್ಮ ಅವರು ರಮೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.